ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಹೇಳನಕಾರಿ ಪೋಸ್ಟ್: ಠಾಣೆಗೊಂದು ಘಟಕ

Published 26 ಆಗಸ್ಟ್ 2023, 14:12 IST
Last Updated 26 ಆಗಸ್ಟ್ 2023, 14:12 IST
ಅಕ್ಷರ ಗಾತ್ರ

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಾಗೂ ಅವಹೇಳನಕಾರಿ ಪೋಸ್ಟ್ ಪ್ರಕಟಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮುಂದಾಗಿರುವ ಪೊಲೀಸರು, ಠಾಣೆಗೊಂದು ವಿಶೇಷ ಘಟಕ ತೆರೆಯಲು ಸಿದ್ಧತೆ ಆರಂಭಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಗೊಳ್ಳುತ್ತಿರುವ ಪೋಸ್ಟ್‌ಗಳ ವಿರುದ್ಧ ಹೆಚ್ಚಿನ ದೂರುಗಳು ವರದಿಯಾಗುತ್ತಿವೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಕಮಿಷನರ್ ಬಿ. ದಯಾನಂದ್, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಪ್ರತ್ಯೇಕ ಘಟಕದ ಅವಶ್ಯಕತೆ ಇರುವುದಾಗಿ ಅಭಿಪ್ರಾಯಪಟ್ಟಿದ್ದರು.

ಇದರ ಬೆನ್ನಲ್ಲೇ ನಗರದ ಪ್ರತಿ ಠಾಣೆಯಲ್ಲಿ ಇಬ್ಬರು ಸಿಬ್ಬಂದಿ ನೇತೃತ್ವದಲ್ಲಿ ಪ್ರತ್ಯೇಕ ಘಟಕ ತೆರೆಯಲು ತಯಾರಿ ನಡೆದಿದೆ. ಸುಳ್ಳು ಸುದ್ದಿ ಮೂಲಕ ಜನರನ್ನು ಪ್ರಚೋದಿಸಿ ಸಮಾಜದ ಶಾಂತಿ ಹಾಗೂ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ವ್ಯಕ್ತಿಗಳನ್ನು ಘಟಕದ ಸಿಬ್ಬಂದಿ ಪತ್ತೆ ಮಾಡಲಿದ್ದಾರೆ. ಬಳಿಕ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಲಿದ್ದಾರೆ.

‘ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಪೋಸ್ಟ್‌ ಪ್ರಕಟಿಸುತ್ತಿದ್ದಾರೆ. ಇದರಿಂದಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುತ್ತಿದೆ. ಹೀಗಾಗಿ, ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇರಿಸಲು ಪ್ರತ್ಯೇಕ ತಂಡ ರಚಿಸಲು ಚಿಂತನೆ ನಡೆದಿದೆ’ ಎಂದು ಕಮಿಷನರ್ ಬಿ. ದಯಾನಂದ್ ಹೇಳಿದರು.

‘ಕಮಿಷನರೇಟ್‌ ಕಚೇರಿ ಹಾಗೂ ಡಿಸಿಪಿ ಕಚೇರಿಗಳಲ್ಲಿ ಈಗಾಗಲೇ ವಿಶೇಷ ಘಟಕಗಳಿವೆ. ಪರಿಣತ ಸಿಬ್ಬಂದಿ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ, ಪ್ರತಿ ಠಾಣೆಯಲ್ಲೂ ಇಂಥ ಘಟಕಗಳು ಆರಂಭವಾಗಲಿವೆ. ಅಲ್ಲಿಯ ಸಿಬ್ಬಂದಿಗೂ ತರಬೇತಿ ನೀಡಲಾಗುವುದು. ಅಗತ್ಯವಿರುವ ಉಪಕರಣಗಳನ್ನೂ ಒದಗಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT