ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಮುಖ್ಯಮಂತ್ರಿ ಹೆಸರಲ್ಲಿ ನಕಲಿ ಟ್ವಿಟರ್‌ ಖಾತೆ; ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅವರ ಗೌರವಕ್ಕೆ ಧಕ್ಕೆ ತರುವ ಪೋಸ್ಟ್‌ಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಸೈಬರ್‌ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಿ.ಆನಂದ್ ಎಂಬುವರು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅವರ ಪತ್ತೆಗೆ ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.

‘ಯಡಿಯೂರಪ್ಪ ಅವರ @ಬಿಎಸ್‌ವೈಬಿಜೆಪಿ ಹೆಸರಿನ ಟ್ವಿಟರ್ ಖಾತೆಯನ್ನು ಖಾಸಗಿ ಸಂಸ್ಥೆಯೊಂದು ನಿರ್ವಹಣೆ ಮಾಡುತ್ತಿದೆ. ಇದೇ ಖಾತೆಗೆ ಹೋಲುವಂತೆ @ಬಿಎಸ್‌ವೈ 8ಜೆಪಿ ಹೆಸರಿನಲ್ಲಿ ನಕಲಿ ಖಾತೆ ಯನ್ನು ಕಿಡಿಗೇಡಿಗಳು ಸೃಷ್ಟಿ ಮಾಡಿದ್ದಾರೆ’ ಎಂದು ಆನಂದ್‌ ದೂರಿನಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು