ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ವಿಡಿಯೊ ಸೃಷ್ಟಿ ಲಿಂಬಾವಳಿ ದೂರು

Last Updated 20 ಜುಲೈ 2019, 19:10 IST
ಅಕ್ಷರ ಗಾತ್ರ

ಬೆಂಗಳೂರು: ‘ನನ್ನ ವಿರುದ್ಧ ರಾಜಕೀಯ ವಿರೋಧಿಗಳು ಆಕ್ಷೇಪಾರ್ಹ ವಿಡಿಯೊ ಹರಿಯಬಿಟ್ಟು ತೇಜೋವಧೆ ಮಾಡು ತ್ತಿದ್ದಾರೆ’ ಎಂದು ಆರೋಪಿಸಿ ಮಹದೇವ ಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಎಚ್‌ಎಎಲ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ಲಿಂಬಾವಳಿ ಪರ ಅವರ ಆಪ್ತ ಸಹಾಯಕ ಗಿರೀಶ್‌ ಭಾರದ್ವಾಜ್‌ ನೀಡಿದ ದೂರಿನ ಆಧಾರದಲ್ಲಿ ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ‘ವ್ಯಕ್ತಿಯೊಬ್ಬನ ಜೊತೆ ಲಿಂಬಾವಳಿಯಂತೆ ಕಾಣುವ ಮತ್ತೊಬ್ಬ ವ್ಯಕ್ತಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ತಿರುಚಿದ ವಿಡಿಯೊ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡ ಲಾಗುತ್ತಿದೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

‘ಎಸ್‌.ಆರ್‌. ಶ್ರೀನಿವಾಸ ಗುಬ್ಬಿ ಎಂಬ ಹೆಸರಿನ ವ್ಯಕ್ತಿ, ತನ್ನ ಫೇಸ್ ಬುಕ್‌ ಖಾತೆಯ ಮೂಲಕ ಈ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ್ದಾನೆ. ಈ ವ್ಯಕ್ತಿ ನಿಖಿಲ್‌ ಕುಮಾರಸ್ವಾಮಿ ಬೆಂಬಲಿಗ’ ಎಂದೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT