ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪು ಸಂದೇಶ, ನಕಲಿ ವಿಡಿಯೊ ಹರಿಬಿಟ್ಟರೆ ಕ್ರಿಮಿನಲ್ ಕೇಸ್

Last Updated 20 ಜುಲೈ 2020, 17:20 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರಿಗ ಚಿಕಿತ್ಸೆ ನೀಡುತ್ತಿರುವ ವಿಕ್ಟೋರಿಯಾ ಆಸ್ಪತ್ರೆ ಹೆಸರಿನಲ್ಲಿ ನಕಲಿ ವಿಡಿಯೊ ಹರಿಬಿಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಇನ್ನುಮುಂದೆ ಯಾರಾದರೂ ತಪ್ಪು ಸಂದೇಶ ಹಾಗೂ ನಕಲಿ ವಿಡಿಯೊ ಹರಿಬಿಟ್ಟರೆ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಹೇಳಿ ವಿಡಿಯೊ ಹರಿಬಿಟ್ಟಿದ್ದ ಸಮೀರ್‌ವುಲ್ಲಾ ಎಂಬುವರನ್ನು ಭಾನುವಾರವೇ ಸಿಸಿಬಿ ಪೊಲೀಸರು ಬಂಧಿಸಿದ್ದರು.

ಈ ಪ್ರಕರಣ ಉಲ್ಲೇಖಿಸಿ ಸಿಸಿಬಿ ಪೊಲೀಸರಿಗೆ ಸೂಚನೆ ನೀಡಿರುವ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಿ. ಯಾರಾದರೂ ತಪ್ಪು ಸಂದೇಶ ಹಾಗೂ ನಕಲಿ ವಿಡಿಯೊ ಅಪ್‌ಲೋಡ್ ಮಾಡಿದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ’ ಎಂದಿರುವುದಾಗಿ ಗೊತ್ತಾಗಿದೆ.

ಕಮಿಷನರ್ ಸೂಚನೆ ಮೇರೆಗೆ ಸಿಸಿಬಿ ಸೈಬರ್ ವಿಭಾಗದ ಸಿಬ್ಬಂದಿ, ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳ ಮೇಲೆ ನಿಗಾ ಇರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT