ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಾಲ ಮನ್ನಾಗೆ ತಿಲಾಂಜಲಿ:ಎಚ್‌ಡಿಕೆ

Last Updated 29 ಫೆಬ್ರುವರಿ 2020, 7:31 IST
ಅಕ್ಷರ ಗಾತ್ರ

ಬೆಂಗಳೂರು: ರೈತರ ಸಾಲ ಮನ್ನಾ ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾಖಲೆಗಳ ನೆಪವೊಡ್ಡಿ ಸಾಲ ಮನ್ನಾ ಯೋಜನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರನ್ನು ಕೈ ಬಿಡುವ ಮೂಲಕ ಸರ್ಕಾರ ರೈತರ ಬಾಳಿಗೆ ಕೊಳ್ಳಿ ಇಡಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಸಾಲ ಮನ್ನಾದ ಬಗ್ಗೆ ಬಿಜೆಪಿಯ ಯಾವುದೇ ನಾಯಕರು ತಲೆ ಕೆಡಿಸಿಕೊಳ್ಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮೀಸಲಿಟ್ಟಿದ್ದ ₹25,000 ಕೋಟಿಯನ್ನು ಸರ್ಕಾರ ಬೇರೆಡೆ ವರ್ಗಾಯಿಸಲಾಗಿದೆ. ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಿಂದ ರಾಜ್ಯದ 1.53 ಲಕ್ಷ ರೈತರನ್ನು ವಂಚಿಸಲಾಗಿದೆ ಎಂದು ಹೇಳಿದ್ದಾರೆ.

ಸಾಲಾ ಮನ್ನಾ ಬಗ್ಗೆ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ರಾಜ್ಯ ಸರ್ಕಾರ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಂದೇಹ ಬೇಡ

ಕುಮಾರಸ್ವಾಮಿ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ‘ಸಾಲ ಮನ್ನಾ ವಿಷಯವಾಗಿ ಊಹಾಪೋಹ ಹರಿದಾಡುತ್ತಿದೆ. ರೈತರು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಸೂಕ್ತ ದಾಖಲೆ ಸಲ್ಲಿಸುವ ಎಲ್ಲ ರೈತರ ಸಾಲ ಮನ್ನಾ ಆಗಲಿದೆ’ ಎಂದು ಹೇಳಿದ್ದಾರೆ.

ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT