ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ- ರಾಜ್ಯ ಸರ್ಕಾರಗಳ ವಿರುದ್ಧ ರೈತರ ಆಕ್ರೋಶ: ಹೆದ್ದಾರಿ ತಡೆದು ಪ್ರತಿಭಟನೆ

Last Updated 25 ಸೆಪ್ಟೆಂಬರ್ 2020, 4:41 IST
ಅಕ್ಷರ ಗಾತ್ರ

ಬೆಂಗಳೂರು: ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಗಳು ಮಾಲೀಕರು ಮತ್ತು ಬಂಡವಾಳಶಾಹಿಗಳ ಪರವಾಗಿ ಇವೆ ಎಂದು ಆರೋಪಿಸಿ, ರೈತ ಸಂಘಟನೆಗಳು ಹೆದ್ದಾರಿಗಳಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸುತ್ತಿವೆ.

ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ 35 ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ನಗರದ ಗೊರಗುಂಟೆಪಾಳ್ಯ ಮತ್ತು ನಾಯಂಡಹಳ್ಳಿ ಹೆದ್ದಾರಿ ಬಳಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ವಾಹನ ತಡೆದು ಪ್ರತಿಭಟನೆ ನಡೆಸಿದರು. ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಈ ರಸ್ತೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ದಟ್ಟಣೆ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT