ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹ: ರೈತರ ಬೃಹತ್ ಪ್ರತಿಭಟನೆ

Last Updated 10 ಅಕ್ಟೋಬರ್ 2019, 9:45 IST
ಅಕ್ಷರ ಗಾತ್ರ

ಬೆಂಗಳೂರು: ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ರೈತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಸ್ವಾತಂತ್ರ್ಯ ಉದ್ಯಾನ ಹಾಗೂ ಶೇಷಾದ್ರಿ ಮೇಲ್ಸೆತುವೆಯಲ್ಲಿ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಉತ್ತರ ಕರ್ನಾಟಕದ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ₹ 10 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಬೇಕು. ಪ್ರತಿ ಎಕರೆಗೆ ₹ 25 ಸಾವಿರದಂತೆ ಬೆಳೆ ಹಾನಿ ಪರಿಹಾರ ಕೊಡಬೇಕು.ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ನೀಡಬೇಕು.

ನಷ್ಟವಾದ ಕೃಷಿ ಭೂಮಿಗೆ ಪರಿಹಾರ ಹಾಗೂ ಪರ್ಯಾಯ ಭೂಮಿ ನೀಡಬೇಕು. ಪದೇಪದೇ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಸ್ಥಳಾಂತರಿಸಬೇಕು. ಪ್ರವಾಹದಿಂದ ತೊಂದರೆಗೆ ಒಳಗಾದ ರೈತರಿಗೆ ಬ್ಯಾಂಕುಗಳು ಸಾಲದ ನೋಟಿಸ್ ನೀಡುವುದನ್ನು ನಿಲ್ಲಿಸಬೇಕು ಎಂದು ರೈತರು ಆಗ್ರಹಿಸಿದರು.

ಉಪಮುಖ್ಯಮಂತ್ರಿ ಭರವಸೆಗೆ ಒಪ್ಪದ ರೈತರು

ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಲು ರೈತರು ತೀರ್ಮಾನಿಸಿದ್ದಾರೆ.

ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದರು. ಅದಕ್ಕೆ ಒಪ್ಪದ ರೈತರು, ಪರಿಹಾರ ಘೋಷಣೆ ಮಾಡಿಯೇ ಸ್ಥಳಕ್ಕೆ ಬನ್ನಿ ಎಂದು ಹೇಳಿದರು. ಸವದಿ ವಾಪಸು ಹೋದರು. ರೈತರು ಪ್ರತಿಭಟನೆ ಮುಂದುವರಿಸಿದರು.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಭಟನಾನಿರತರೊಂದಿಗೆ ಮಾತನಾಡಿದರು.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಭಟನಾನಿರತರೊಂದಿಗೆ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT