ಬುಧವಾರ, ಆಗಸ್ಟ್ 4, 2021
20 °C

ಹೆಸರಘಟ್ಟದಲ್ಲಿ ಬಿತ್ತನೆ ಬೀಜ ಪೂರೈಕೆಗೆ ರೈತರ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಸರಘಟ್ಟ: ‘ರೈತರಿಗೆ ಒಂದು ಎಕರೆ ಪ್ರದೇಶಕ್ಕೆ 12 ಕೆಜಿಯಿಂದ 15 ಕೆ.ಜಿ.ಬಿತ್ತನೆ ಬೀಜ ಬೇಕಾಗುತ್ತದೆ. ಆದರೆ ಸರ್ಕಾರವು ಕೇವಲ 5 ಕೆ.ಜಿ. ಬಿತ್ತನೆ ಬೀಜವನ್ನು ನೀಡುತ್ತಿದೆ. ಬಿಜೆಪಿ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಅಗತ್ಯ ಪ್ರಮಾಣದ ಬಿತ್ತನೆ ಬೀಜವನ್ನು ನೀಡಲಿ’ ಎಂದು ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ ವಿ.ಅರ್.ನಾರಾಯಣ ರೆಡ್ಡಿ ಆಗ್ರಹಿಸಿದರು.

ಹೆಸರಘಟ್ಟದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಕುರಿತು ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ’ ಎಂದರು. 

‘ಆಯಾ ಜಿಲ್ಲಾ ವ್ಯಾಪ್ತಿಯ ಬೆಳೆಗಳಿಗೆ ಅನುಗುಣವಾಗಿ ಬಿತ್ತನೆ ಬೀಜವನ್ನು ವಿತರಿಸಬೇಕು. ರೈತರಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜವನ್ನು ವಿತರಣೆ ಮಾಡುವಂತೆ ಸಚಿವರಿಗೆ ಮನವಿ ಪತ್ರವನ್ನು ನೀಡಲಾಗಿದೆ’ ಎಂದು ಅವರು ತಿಳಿಸಿದರು.

‘ಇಪ್ಪತ್ತು ಕುಂಟೆ ಭೂಮಿಯಲ್ಲಿ ಕೃಷಿ ಮಾಡುವ ಸಣ್ಣ ರೈತರಿಗೆ ಬಿತ್ತನೆ ಬೀಜ ನೀಡುವುದಿಲ್ಲ. ಅಧಿಕಾರಿಗಳನ್ನು ಕೇಳಿದರೆ ಕಂಪ್ಯೂಟರ್ ದಾಖಲೆಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳುತ್ತಾರೆ. ಹಾಗಾದರೆ ಸಣ್ಣ ರೈತ ಎಲ್ಲಿಗೆ ಹೋಗಬೇಕು’ ಎಂದು ಪ್ರಶ್ನಿಸಿದ ಅವರು, ‘ಈ ಕೂಡಲೇ ಸಣ್ಣ ಹಿಡುವಳಿದಾರರಿಗೂ ಬಿತ್ತನೆ ಬೀಜವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸಮಿತಿ ಸದಸ್ಯರಾದ ಹರೀಶ್,ಮಂಜುನಾಥ್ ಹೊಸಕೋಟೆ ಮತ್ತು ರಾಮಣ್ಣ ಉಪಸ್ಥಿತರಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು