ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬಿನ ಎಫ್ಆರ್‌ಪಿ ದರ ಏರಿಕೆಗೆ ಆಗ್ರಹ: ರಸ್ತೆಯಲ್ಲಿ ರೈತರ ಉರುಳುಸೇವೆ

ಕಬ್ಬಿನ ಎಫ್ಆರ್‌ಪಿ ದರ ಏರಿಕೆ ಮಾಡುವಂತೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ
Last Updated 24 ನವೆಂಬರ್ 2022, 10:50 IST
ಅಕ್ಷರ ಗಾತ್ರ

ಬೆಂಗಳೂರು: ಕಬ್ಬಿನ ಎಫ್ಆರ್‌ಪಿ ದರ ಏರಿಕೆ ಮಾಡುವಂತೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಉದ್ಯಾನ ಎದುರಿನ ಮುಖ್ಯ ರಸ್ತೆಯಲ್ಲಿ ಗುರುವಾರ ಉರುಳು ಸೇವೆ ಮಾಡಿ‌ ಆಕ್ರೋಶ ಹೊರಹಾಕಿದರು.

ರಾಜ್ಯ ರೈತ ಸಂಘಟನೆಗಳ‌ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ‌ ಮನೆ ಎದುರು ಪ್ರತಿಭಟನೆ ನಡೆಸಲು ರೈತರು ತೀರ್ಮಾನಿಸಿದ್ದರು. ಆದರೆ, ಅದಕ್ಕೆ ಅನುಮತಿ ಸಿಕ್ಕಿರಲಿಲ್ಲ. ಹೀಗಾಗಿ, ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ‌.

ಗುರುವಾರ ಮಧ್ಯಾಹ್ನ ಎಲ್ಲ ರೈತರು ಅರೆಬೆತ್ತಲಾಗಿ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದರು. ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಉರುಳು ಸೇವೆ ಮಾಡಿದರು.

ಸ್ಥಳದಲ್ಲಿದ್ದ ಪೊಲೀಸರು, ರೈತರನ್ನು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಮುಖ್ಯಮಂತ್ರಿ ಮನೆಗೆ ಹೋಗಬೇಕು ಎಂದು ರೈತರು ಆಗ್ರಹಿಸಿದರು.

ಅವರನ್ನು ಸಮಾಧಾನಪಡಿಸಿದ ಪೊಲೀಸರು, ವಾಪಸು ಪ್ರತಿಭಟನೆ ಸ್ಥಳಕ್ಕೆ ಕಳುಹಿಸಿದರು. ಯಥಾಪ್ರಕಾರ ಉದ್ಯಾನದಲ್ಲಿ ಪ್ರತಿಭಟನೆಮುಂದುವರೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT