ಬೆಂಗಳೂರು: ಹೇಳಿದ ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ 10 ವರ್ಷದ ಹೆಣ್ಣು ಮಗುವಿಗೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ ತಂದೆಯನ್ನು ಯಲಹಂಕ ನ್ಯೂಟೌನ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನೇಪಾಳ ಮೂಲದ ದಂಪತಿ, ಠಾಣಾ ವ್ಯಾಪ್ತಿಯ ಚಿಕ್ಕಬೆಟ್ಟದಹಳ್ಳಿಯ ಬಾಲಾಜಿ ಲೇಔಟ್ನ ಬಾಡಿಗೆ ಮನೆಯಲ್ಲಿ ನೆಲಸಿದ್ದಾರೆ. ಮಗು ಹೇಳಿದ ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ ತಂದೆ ಲೋಕೇಶ್ ಅವರು ಹಲ್ಲೆ ನಡೆಸಿದ್ದಾರೆ. ಬಾಲಕಿಯ ಕೈ-ಕಾಲು, ಬೆನ್ನಿಗೆ ಗಾಯವಾಗಿದೆ. ತಾಯಿ ಅಮೃತಾ ಅವರ ಎದುರೇ ಹಲ್ಲೆ ನಡೆಸಿದ್ದರೂ ಆಕೆ ರಕ್ಷಣೆ ಮಾಡಿರಲಿಲ್ಲ ಎನ್ನಲಾಗಿದೆ.

ಜೋರಾಗಿ ಅಳುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಮಗುವನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

‘ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಹಲ್ಲೆಯ ಪರಿಣಾಮ ಮಗುವಿನ ದೇಹದ ಭಾಗದ ಬಹುತೇಕ ಕಡೆ ರಕ್ತ ಹೆಪ್ಪುಗಟ್ಟಿದೆ. ಮಗುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಮಗುವಿನ ತಂದೆ ಲೋಕೇಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಲೋಕೇಶ್ ಅವರು ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಮೃತಾ ಅವರು ಮನೆ ಕೆಲಸ ಮಾಡುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.

ಸದ್ಯ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.