ಮಂಗಳವಾರ, ಡಿಸೆಂಬರ್ 6, 2022
21 °C

ಬೆಂಗಳೂರು: ₹50 ಸಾವಿರ ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಎಫ್‌ಡಿಎ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಿವೃತ್ತಿ ವೇತನ ಮಂಜೂರು ಮಾಡುವ ಕಡತ ವರ್ಗಾಯಿಸಲು ₹50 ಸಾವಿರ ಲಂಚ ಪಡೆಯುತ್ತಿದ್ದ ಆರೋಗ್ಯ ಇಲಾಖೆ ಪ್ರಥಮ ದರ್ಜೆ ಸಹಾಯಕ ಸುಮಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನಿವೃತ್ತಿ ವೇತನ ಮಂಜೂರು ಮಾಡುವ ಕಡತವನ್ನು ತಮ್ಮ ಕಚೇರಿಯಿಂದ ಅಕೌಂಟೆಂಟ್ ಜನರಲ್ ಕಚೇರಿಗೆ ವರ್ಗಾಯಿಸಲು  ₹50 ಸಾವಿರ ಲಂಚಕ್ಕೆ ಸುಮಂತ್ ಬೇಡಿಕೆ ಇಟ್ಟಿದ್ದರು. ಮಾಗಡಿ ರಸ್ತೆಯಲ್ಲಿನ ಆರೋಗ್ಯ ಭವನದಲ್ಲಿ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿ ಬಂಧಿಸಲಾಗಿದೆ. ಮುಖ್ಯ ಆಡಳಿತಾಧಿಕಾರಿ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ನಿವೃತ್ತ ಸಹಾಯಕ ಆಡಳಿತಾಧಿಕಾರಿ ಸಂಗನ ಬಸಪ್ಪ ಕಲ್ಲಪ್ಪ ಕೊರಬು ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಲೋಕಾಯುಕ್ತ ಪೊಲೀಸರು ವಿವರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು