ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಸ್‌ಎಂಇಗೆ ಆದ್ಯತೆ: ಭರವಸೆ

‘ಎಂಎಸ್‌ಎಂಇ ಕ್ಷೇತ್ರದಲ್ಲಿ ರಫ್ತಿಗೆ ಉತ್ತೇಜನ‘ ರಾಷ್ಟ್ರೀಯ ವಿಚಾರಸಂಕಿರಣ
Last Updated 27 ಆಗಸ್ಟ್ 2019, 20:01 IST
ಅಕ್ಷರ ಗಾತ್ರ

ಬೆಂಗಳೂರು: ‘ಸಮಗ್ರ ಅಭಿವೃದ್ಧಿಯನ್ನು ಒಳಗೊಂಡ ನೂತನ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ಇದರಲ್ಲಿಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ (ಎಂಎಸ್‌ಎಂಇ)ವಿಶೇಷ ಆದ್ಯತೆ ನೀಡಲಾಗುವುದು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಟಿ.ಎಂ. ವಿಜಯಭಾಸ್ಕರ್ ಭರವಸೆ ನೀಡಿದರು.

ಅಸೋಚಾಮ್ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ‘ಎಂಎಸ್‌ಎಂಇ ಕ್ಷೇತ್ರದಲ್ಲಿ ರಫ್ತಿಗೆ ಉತ್ತೇಜನ‘ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು.

‘ಸದ್ಯ ಜಾರಿಯಲ್ಲಿರುವ 2014-19ರ ಕೈಗಾರಿಕೆ ನೀತಿಯ ಅವಧಿ ಸೆಪ್ಟೆಂಬರ್‌ಗೆ ಕೊನೆಗೊಳ್ಳಲಿದೆ. ನೂತನ ನೀತಿಯಲ್ಲಿ ಉದ್ಯೋಗಾವಕಾಶ ಸೃಷ್ಟಿ ಹಾಗೂ ಕೌಶಲ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಈ ನೀತಿಯು ಎಂಎಸ್‌ಎಂಇ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಾಯವಾಗಲಿದೆ’ ಎಂದರು.

‘ಡಿಸೈನ್‌ ಸ್ಟುಡಿಯೊ ಆರಂಭಿಸುವ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗುವುದು.ರಾಜ್ಯದಲ್ಲಿ ನೆರೆ ಹಾವಳಿಯಿಂದ 8 ಲಕ್ಷ ಮಂದಿ ಸಂತ್ರಸ್ತರಾಗಿದ್ದು, 2 ಲಕ್ಷ ಮನೆಗಳಿಗೆ ಹಾನಿಯಾಗಿದೆ’ ಎಂದರು.

ಎಫ್‌ಕೆಸಿಸಿಐ ಅಧ್ಯಕ್ಷ ಸಿ.ಆರ್. ಜನಾರ್ದನ, ‘ಎಂಎಸ್‌ಎಂಇ ಗರಿಷ್ಠ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಮಾಡುತ್ತಿದೆ.ಆರ್ಥಿಕತೆಗೆ ಕೂಡಾ ಉತ್ತಮ ಕೊಡುಗೆ ನೀಡಲಾಗುತ್ತಿದೆ. ಅಗ್ಗದ ದರದಲ್ಲಿಬ್ಯಾಂಕ್‌ಗಳಿಂದ ಸಾಲ ಸಿಗುವಂತಾಗಬೇಕು. ಅದೇ ರೀತಿ, ಜಿಎಸ್‌ಟಿ ದರದಲ್ಲಿ ರಿಯಾಯಿತಿ ನೀಡಬೇಕು. ಈ ವಿಚಾರವನ್ನು ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತರಲಾಗಿದೆ’ ಎಂದರು.

*
ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಸ್‌ಆರ್‌) ಕೈಗಾರಿಕೆಗಳು ನೆರವನ್ನು ನೀಡಿ ಸಂತ್ರಸ್ತರ ನೋವಿಗೆ ಸ್ಪಂದಿಸಬೇಕು.
-ಟಿ.ಎಂ. ವಿಜಯಭಾಸ್ಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT