ಸೋಮವಾರ, ಏಪ್ರಿಲ್ 19, 2021
31 °C

ಬೋನಿಗೆ ಬಿದ್ದ ಹೆಣ್ಣು ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ಗಡಿ ಗ್ರಾಮ ನಾರಾಯಣಪುರ ಹತ್ತಿರ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಒಂದೂವರೆ ವರ್ಷದ ಹೆಣ್ಣು ಚಿರತೆ ಬಿದ್ದಿದೆ.

ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಟ ಹೆಚ್ಚಾಗಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಇಲಾಖೆ ಕೆಲವು ದಿನಗಳ ಹಿಂದೆ ಬೋನು ಇರಿಸಿತ್ತು. ಗುರುವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.

ಅದರಂಗಿ ಅರಣ್ಯವು ನೆಲಮಂಗಲ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಹೊಂದಿಕೊಂಡಂತೆ ಇದ್ದು, ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಈ ಭಾಗದಲ್ಲಿನ ಗ್ರಾಮಗಳ ಜನರು, ದನಗಾಹಿಗಳು ಹಾಗೂ ಕುರಿ ಮೇಕೆ ಮೇಯಿಸುವವರಿಗೆ ಭಯ ಮೂಡಿಸುತ್ತಿವೆ. ರಾತ್ರಿ ವೇಳೆ ಗ್ರಾಮಗಳಿಗೆ ನುಗ್ಗಿ ಕರು, ಮೇಕೆ, ಕುರಿಗಳನ್ನು ತಿನ್ನುತ್ತಿದ್ದರಿಂದ ಜನ ದಿಗಿಲುಗೊಂಡಿದ್ದರು.

ಸೆರೆ ಸಿಕ್ಕಿರುವ ಚಿರತೆಯನ್ನು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಚೇತನ್ ನಾಯಕ್, ಅರಣ್ಯ ರಕ್ಷಕ ಶ್ರೀನಾಥ್ ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು