ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಟೆಕಿ ಕಾರು ಹಿಂಬಾಲಿಸಿ ಕಿರುಕುಳ

Published 24 ನವೆಂಬರ್ 2023, 23:49 IST
Last Updated 24 ನವೆಂಬರ್ 2023, 23:49 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೊರಟಿದ್ದ ಮಹಿಳಾ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರ ಕಾರು ಹಿಂಬಾಲಿಸಿದ್ದ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದು, ಈ ದೃಶ್ಯ ಕಾರಿನ ಡ್ಯಾಶ್‌ಬೋರ್ಡ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಪ್ರಕಟಿಸಿ ಪೊಲೀಸರ ಖಾತೆಗೆ ಟ್ಯಾಗ್ ಮಾಡಿರುವ ಮಹಿಳೆ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

‘ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳೆ, ಕೆಲಸ ಮುಗಿಸಿ ತಮ್ಮ ಕಾರಿನಲ್ಲಿ ಮನೆಯತ್ತ ಹೊರಟಿದ್ದರು. ಪಾನಮತ್ತನಾಗಿದ್ದ ಎನ್ನಲಾದ ವ್ಯಕ್ತಿ, ಬೈಕ್‌ನಲ್ಲಿ ಕಾರು ಹಿಂಬಾಲಿಸಿದ್ದ. ಕಾರಿನ ಅಕ್ಕ–ಪಕ್ಕದಲ್ಲಿ ಅಡ್ಡಾದಿಡ್ಡಿ ಬೈಕ್‌ ಚಲಾಯಿಸಿ ಡಿಕ್ಕಿ ಹೊಡೆಯಲು ಯತ್ನಿಸಿದ್ದ’ ಎಂದು ಮೂಲಗಳು ಹೇಳಿವೆ.

‘ಬಿಇಎಂ ಬಡಾವಣೆ ಬಳಿ ಕಾರು ಅಡ್ಡಗಟ್ಟಿದ್ದ ಆರೋಪಿ, ಸನ್ನೆಗಳ ಮೂಲಕ ಮಹಿಳೆಗೆ ಕಿರುಕುಳ ನೀಡಿದ್ದ. ಕಾರಿನ ಬಾಗಿಲು ತೆರೆಯುವಂತೆ ವ್ಯಕ್ತಿ ಕೂಗಾಡಿದ್ದ. ಹೆದರಿದ್ದ ಮಹಿಳೆ, ಬಾಗಿಲು ತೆರೆದಿರಲಿಲ್ಲ. ಕೆಲ ನಿಮಿಷಗಳ ನಂತರ ಮಹಿಳೆ, ಕಾರು ಸಮೇತ ಅಲ್ಲಿಂದ ಹೊರಟು ಮನೆ ತಲುಪಿದ್ದರು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT