ಬೆಂಗಳೂರು: ‘ಫೆಂಗಲ್’ ಚಂಡಮಾರುತದ ಪರಿಣಾಮ ನಗರದಲ್ಲೂ ಮಳೆ ಆಗುವ ಸಾಧ್ಯತೆಯಿದ್ದು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳ ಜೊತೆ ವರ್ಚ್ಯುವಲ್ ಸಭೆ ನಡೆಸಿದ ಅವರು, ಆಯಾ ವಲಯ ವ್ಯಾಪ್ತಿಯ ಎಲ್ಲಾ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

’ಮೂರು–ನಾಲ್ಕು ದಿನ ಮಳೆ ಬರುವ ಮುನ್ಸೂಚನೆಯಿದೆ. ಗಾಳಿ ಕೂಡಾ ಹೆಚ್ಚಾಗಬಹುದು. ಮರ ಕಟಾವು ಮಾಡುವ ಎಲ್ಲ 28 ತಂಡಗಳು ಸನ್ನದ್ಧರಾಗಿರಬೇಕು. ಮರ, ಮರದ ರೆಂಬೆ ಬಿದ್ದ ದೂರುಗಳು ಬಂದ ಕೂಡಲೆ ತೆರವುಗೊಳಿಸಬೇಕು ಎಂದು ಹೇಳಿದರು.

ಮಳೆ ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್ಗಳನ್ನು ಸಿದ್ದವಾಗಿಟ್ಟುಕೊಂಡಿರಬೇಕು. ಈ ಹಿಂದೆ ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮರಳು ಚೀಲಗಳನ್ನು ಇಟ್ಟಿಕೊಂಡು, ಸಮಸ್ಯೆಗಳನ್ನು ತಪ್ಪಿಸಲು ಪರಿಹಾರ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕೆಂದು ಸೂಚಿಸಿದರು.

ಬೃಹತ್ ನೀರುಗಾಲುವೆಗಳಲ್ಲಿ ಜೆಸಿಬಿಗಳ ಮೂಲಕ ಹೂಳೆತ್ತಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ರಸ್ತೆ ಬದಿಯ ಶೋಲ್ಡರ್ ಡ್ರೈನ್ಗಳಿಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.