ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋಡಗಲಹಟ್ಟಿ: ಸಂಭ್ರಮದ ಊರಹಬ್ಬ

Published 15 ಮೇ 2024, 16:12 IST
Last Updated 15 ಮೇ 2024, 16:12 IST
ಅಕ್ಷರ ಗಾತ್ರ

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಕೋಡಗಲಹಟ್ಟಿ ಗ್ರಾಮದಲ್ಲಿ ಗ್ರಾಮ ದೇವರುಗಳ ಜಾತ್ರಾ ಮಹೋತ್ಸವ(ಊರಹಬ್ಬ) ಮೂರು ದಿನ ವಿಜೃಂಭಣೆಯಿಂದ ನಡೆಯಿತು.

ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾಮಾಂಜನೇಯ, ಓಂಶಕ್ತಿ ಹಾಗೂ ಮಾರ್ಗದಾಂಬ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ದೀಪಗಳ ಆರತಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಮಂಗಳವಾರ ಸಂಜೆ ಅಣ್ಣಮ್ಮ, ಮುತ್ಯಾಲಮ್ಮ, ಸಫಲಮ್ಮ ಹಾಗೂ ಚೌಡೇಶ್ವರಿ ದೇವತೆಗಳ ಹೂವಿನ ಪಲ್ಲಕ್ಕಿ ಉತ್ಸವ ನಡೆಯಿತು.

ಬುಧವಾರ ಬೆಳಿಗ್ಗೆ ಪ್ರತಿ ಮನೆಯಿಂದ ಮಹಿಳೆಯರು ಆರತಿ ಹೊತ್ತು ಗ್ರಾಮದಲ್ಲಿ ಮೆರವಣಿಗೆ ನಡೆಸಿದರು. ನಂತರ ದೇವತೆಗಳಿಗೆ ದೀಪದ ಆರತಿ ಬೆಳಗಲಾಯಿತು.

ವಿವಿಧ ಜಾನಪದ ಕಲಾತಂಡಗಳ ಪ್ರದರ್ಶನ ಜನರ ಗಮನ ಸೆಳೆಯಿತು. ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT