ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭ್ರೂಣ ಲಿಂಗ ಪತ್ತೆ | ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ: ಆರೋಗ್ಯ ಇಲಾಖೆ

Published 20 ಜೂನ್ 2024, 15:25 IST
Last Updated 20 ಜೂನ್ 2024, 15:25 IST
ಅಕ್ಷರ ಗಾತ್ರ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ನೀಡುವ ಬಹುಮಾನವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. 

ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯ್ದೆ (ಪಿಸಿಪಿಎನ್‍ಡಿಟಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಶಸ್ವಿಗೊಂಡ ಗುಪ್ತ ಕಾರ್ಯಾಚರಣೆಯಲ್ಲಿ ಮಾಹಿತಿ ನೀಡಿದವರಿಗೆ ಈ ಬಹುಮಾನ ನೀಡಲಾಗುವುದು. ಬಹುಮಾನದ ಮೊತ್ತದಲ್ಲಿ ₹50 ಸಾವಿರವನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದಲೂ, ಇನ್ನುಳಿದ ₹50 ಸಾವಿರ ಮೊತ್ತವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಸಿಪಿಎನ್‍ಡಿಟಿ ಶುಲ್ಕದಿಂದ ಭರಿಸಬೇಕು ಎಂದು ತಿಳಿಸಲಾಗಿದೆ. 

2023ರ ಡಿ.11ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮೇಲ್ವಿಚರಣಾ ಮಂಡಳಿ ಸಭೆಯಲ್ಲಿ ಬಹುಮಾನದ ಮೊತ್ತವನ್ನು ಏರಿಸಲು ನಿರ್ಧರಿಸಲಾಗಿತ್ತು ಎಂದು ಹೇಳಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT