ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಭ್ರೂಣಹತ್ಯೆ: ರಹಸ್ಯ ಬಯಲಿಗೆಳೆದರೆ ಬಹುಮಾನ

Last Updated 24 ಏಪ್ರಿಲ್ 2019, 19:26 IST
ಅಕ್ಷರ ಗಾತ್ರ

ಬೆಂಗಳೂರು: ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವ ವೈದ್ಯರು, ಸ್ಕ್ಯಾನಿಂಗ್‌ ಸೆಂಟರ್‌ಗಳು, ಇದಕ್ಕಾಗಿ ಪ್ರಚೋದಿಸುವ ದಲ್ಲಾಳಿಗಳ ವಿರುದ್ಧ ಗುಪ್ತ ಕಾರ್ಯಾಚರಣೆ ನಡೆಸಿ ಇಲಾಖೆಗೆ ಮಾಹಿತಿ ನೀಡುವ ವ್ಯಕ್ತಿಗಳಿಗೆ ₹50 ಸಾವಿರ ಬಹುಮಾನ ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ, ತಂತ್ರವಿಧಾನಗಳ ಕಾಯ್ದೆ 1994 ಅನ್ನು ಪರಿಣಾಮಕಾರಿಯಾಗಿ ಜಾರಿ ತರಲು ಈ ಕ್ರಮ ಅನುಸರಿಸಲು ನಿರ್ಧರಿಸಿರುವುದಾಗಿ ಇಲಾಖೆ ಆಯುಕ್ತ ಪಂಕಜ್‌ಕುಮಾರ್‌ ಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುಪ್ತ ಕಾರ್ಯಾಚರಣೆ ನಡೆಸಲು ಬೇಕಾದ ಮಾರ್ಗಸೂಚಿಗಳ ಮಾಹಿತಿ ನೀಡಲಾಗುವುದು. ಅಲ್ಲದೆ, ಮಾಹಿತಿ ನೀಡುವವರ ಹೆಸರು ಮತ್ತು ವಿಳಾಸವನ್ನು ಗೋಪ್ಯವಾಗಿಡಲಾಗುವುದು ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ಡಾ.ಪ್ರಭುದೇವ ಬಿ.ಗೌಡ, ಉಪನಿರ್ದೇಶಕರು, ಪಿ.ಸಿ ಅಂಡ್‌ ಪಿ.ಎನ್‌.ಡಿ.ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು, ಮೊಬೈಲ್ ಸಂಖ್ಯೆ 9449843438, ಇ–ಮೇಲ್‌ ddpcpndt-hfws@karnataka.gov.in ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT