ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರೂಣ ಹತ್ಯೆ, ಗರ್ಭಪಾತ: ತನಿಖಾ ತಂಡ ರಚನೆ

Published 22 ಮಾರ್ಚ್ 2024, 14:53 IST
Last Updated 22 ಮಾರ್ಚ್ 2024, 14:53 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ನೆಲಮಂಗಲದಲ್ಲಿ ಭ್ರೂಣ ಹತ್ಯೆ, ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ತನಿಖಾ ತಂಡ ರಚಿಸಿದೆ. 

ಇಲಾಖೆಯ ಯೋಜನಾ ನಿರ್ದೇಶಕರ (ಆರ್‌.ಸಿ.ಎಚ್) ನೇತೃತ್ವದ ತಂಡದಲ್ಲಿ, ವೈದ್ಯಕೀಯ ವಿಭಾಗದ ಉಪನಿರ್ದೇಶಕರು ಹಾಗೂ ಕುಟುಂಬ ಕಲ್ಯಾಣ ವಿಭಾಗದ ಉಪನಿರ್ದೇಶಕರು ಇರಲಿದ್ದಾರೆ. ಈ ತಂಡವು ಆಸ್ಪತ್ರೆಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ವಾಸ್ತವಾಂಶದ ಬಗ್ಗೆ ತನಿಖೆ ನಡೆಸಿ, ಸೂಕ್ತ ದಾಖಲೆಗಳೊಂದಿಗೆ ವಿವರವಾದ ವರದಿಯನ್ನು ಇದೇ 26ರಂದು ಸಲ್ಲಿಸಬೇಕು ಎಂದು ಇಲಾಖೆ ಆಯುಕ್ತ ಡಿ. ರಂದೀಪ್ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT