ಶನಿವಾರ, ಜನವರಿ 28, 2023
20 °C

ಕೆಲಸಕ್ಕಿದ್ದ ಆಭರಣ ಮಳಿಗೆಯಲ್ಲಿ ₹ 58.60 ಲಕ್ಷ ಮೌಲ್ಯದ ಆಭರಣ ಕಳವು: ಯುವತಿ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಲಸಕ್ಕಿದ್ದ ಆಭರಣ ಮಳಿಗೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪದಡಿ ಆರ್‌. ವಾಣಿ ವಾಡೇಕರ್ (22) ಎಂಬುವವರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

‘ಬೀದರ್‌ನ ವಾಣಿ, ಕೆಲಸ ಹುಡುಕಿಕೊಂಡು ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಯಲಹಂಕದ ಆರ್.ಎಂ.ಜೆಡ್ ಗ್ಯಾಲೆರಿಯಾ ಮಾಲ್‌ನಲ್ಲಿರುವ ತನಿಷ್ಕ ಜ್ಯುವೆಲರಿ ಮಳಿಗೆಯಲ್ಲಿ ಮಾರುಕಟ್ಟೆ ಪ್ರತಿನಿಧಿಯಾಗಿ ಕೆಲಸಕ್ಕೆ ಸೇರಿದ್ದರು’ ಎಂದು ಪೊಲೀಸರು ಹೇಳಿದರು.

‘ಕೆಲಸ ಮಾಡುತ್ತಲೇ ಆರೋಪಿ, ಆಗಾಗ ಚಿನ್ನಾಭರಣ ಕದಿಯುತ್ತಿದ್ದರು. ಇತ್ತೀಚೆಗೆ ಅವರ ಕೃತ್ಯದ ಬಗ್ಗೆ ಮಳಿಗೆ ವ್ಯವಸ್ಥಾಪಕರಿಗೆ ಅನುಮಾನ ಬಂದಿತ್ತು. ಅವರು ನೀಡಿದ್ದ ದೂರು ಆಧರಿಸಿ ಆರೋಪಿಯನ್ನು
ಬಂಧಿಸಲಾಗಿದೆ. ₹ 58.60 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಜ್ರದ ಆಭರಣ ಜಪ್ತಿ ಮಾಡಲಾಗಿದೆ’ ಎಂದು
ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು