ಶುಕ್ರವಾರ, ಫೆಬ್ರವರಿ 21, 2020
18 °C
ಪ್ರೇಮ ವಿವಾಹ ಸಂಬಂಧ ಹೊಡೆದಾಟ

ಹುಡುಗನ ತಂದೆ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರೇಮ ವಿವಾಹ ಸಂಬಂಧ ನಡೆದ ಹೊಡೆದಾಟದಲ್ಲಿ 45 ವರ್ಷದ ವ್ಯಕ್ತಿಯೊಬ್ಬರ ಮೇಲೆ ಕ್ರಿಕೆಟ್‌ ಸ್ಟಂಪ್‌ಗಳಿಂದ ಹಲ್ಲೆ ಮಾಡಿರುವ ಘಟನೆ ಕೋರಮಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಮದುವೆಗೆ ಸಂಬಂಧಿಸಿದಂತೆ ಯುವತಿಯ ಮನೆಯವರು ಹುಡುಗನ ತಂದೆ ಜೊತೆ ಪದೇ ಪದೇ ಜಗಳ ತೆಗೆದು ಹೊಡೆದಾಟಕ್ಕೆ ಇಳಿಯುತ್ತಿದ್ದರು. ಹಲ್ಲೆಗೊಳಗಾದವರನ್ನು ಕೆನ್ನಿ ಎಂದು ಗುರುತಿಸಲಾಗಿದೆ. ಇವರ ಪುತ್ರ ನೆರೆಮನೆಯ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದೇ ಘಟನೆಗೆ ಕಾರಣ ಎಂದು ಕೋರಮಂಗಲ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಲಾಗಿದೆ.

ಕುಪ್ಪರಾಜು, ಮುರುಗ, ಶಕ್ತಿವೇಲು, ಮುರಳಿ ಹಾಗೂ ಸುಂದರ್‌ ಎಂಬುವರು ಹಲ್ಲೆ ನಡೆಸಿದ್ದಾಗಿ ಕೆನ್ನಿ ದೂರಿನಲ್ಲಿ ಆರೋಪಿಸಿದ್ದಾರೆ. ತಮ್ಮ ಮಗ ನೆರೆಮನೆಯ ಯುವತಿಯನ್ನು ಪ್ರೀತಿಸಿ ಇತ್ತೀಚೆಗೆ ಮದುವೆ ಆಗಿದ್ದರು. ಈ ಮದುವೆ ಹುಡುಗಿ ಮನೆಯವರಿಗೆ ಇಷ್ಟವಿರಲಿಲ್ಲ. ತಾವು ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿಯಲ್ಲಿದ್ದಾಗ ಆರೋಪಿಗಳು ದಾಳಿ ಮಾಡಿ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ವಿವರಿಸಿದ್ದಾರೆ.

ತಲೆ ಹಾಗೂ ಬೆನ್ನಿಗೆ ತೀವ್ರ ಗಾಯಗಳಾಗಿರುವ ಕೆನ್ನಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು