ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಿಂದೂ’ ಪದ ವಿವಾದ: ಸತೀಶ ಜಾರಕಿಹೊಳಿ ವಿರುದ್ಧ ಖಾಸಗಿ ದೂರು

Last Updated 9 ನವೆಂಬರ್ 2022, 20:37 IST
ಅಕ್ಷರ ಗಾತ್ರ

ಬೆಂಗಳೂರು: ‘ಹಿಂದೂ’ ಪದದ ಕುರಿತು ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿರುದ್ಧ ನಗರದ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

ಈ ಸಂಬಂಧ ಹೈಕೋರ್ಟ್‌ ವಕೀಲ ಕೆ. ದಿಲೀಪ್ ಕುಮಾರ್ ನಗರದ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ಬುಧವಾರ ಖಾಸಗಿ ದೂರು ದಾಖಲಿಸಿದ್ದು, ‘ಸತೀಶ್ ಜಾರಕಿಹೊಳಿ ವಿರುದ್ಧ ಗಲಭೆ ಮತ್ತು ಮಾನಹಾನಿ ಪ್ರಕರಣಗಳಡಿ ಸಂಜ್ಞೇಯ ಅಪರಾಧಗಳನ್ನು ಪರಿಗಣಿಸಿ ವಿಚಾರಣೆ ನಡೆಸಬೇಕು’ ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.

ದೂರಿನಲ್ಲಿ ಏನಿದೆ?: ‘ ಸತೀಶ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಮೂಲಕ ಜನರ ಭಾವನೆಗಳನ್ನು ಅವಮಾನಿಸಿ ಧರ್ಮದ ಗೌರವಕ್ಕೆ ಧಕ್ಕೆ ತರಲಾಗಿದೆ. ಇದು ಭಾರತೀಯ ದಂಡ ಸಂಹಿತೆ–1860ರ ಕಲಂ 500 (ಮಾನಹಾನಿ) ಮತ್ತು 159ರ ಅಡಿಯಲ್ಲಿ (ಗಲಭೆ ಕಾರಣವಾಗುವಂತೆ ಪ್ರಚೋದನೆ ಹೇಳಿಕೆ ನೀಡಿದ) ಅಪರಾಧ ಕೃತ್ಯವಾಗಿದೆ. ಆದ್ದರಿಂದ, ಆರೋಪಿ ವಿರುದ್ಧ ಸಂಜ್ಞೇಯ ಅಪರಾಧ ಕೃತ್ಯಗಳನ್ನು ಪರಿಗಣಿಸಬೇಕು’ ಎಂದು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT