ಕೆರೆ ತುಂಬಿಸಲು ಸೂಚನೆ: ಡಿ.ಕೆ.ಶಿ

7
ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಳ

ಕೆರೆ ತುಂಬಿಸಲು ಸೂಚನೆ: ಡಿ.ಕೆ.ಶಿ

Published:
Updated:

ಬೆಂಗಳೂರು: ‘ರಾಜ್ಯದ ಜಲಾಶಯಗಳಿಗೆ ದಾಖಲೆ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಕಾಲುವೆಗಳನ್ನು ದುರಸ್ತಿಗೊಳಿಸಿ, ಸಾಧ್ಯವಿರುವ ಕಡೆಯಲ್ಲೆಲ್ಲಾ ಕೆರೆಗಳನ್ನು ತುಂಬಿಸುವಂತೆ ಸೂಚನೆ ನೀಡಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಉತ್ತಮವಾಗಿ ಮಳೆಯಾಗುತ್ತಿರುವ ಪರಿಣಾಮ ರಾಜ್ಯದ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಕೆಆರ್‌ಎಸ್‌, ಹೇಮಾವತಿ, ಹಾರಂಗಿ, ಕಬಿನಿ, ಲಿಂಗನಮಕ್ಕಿ, ತುಂಗಭದ್ರಾ ಹಾಗೂ ಕೃಷ್ಣಾ ಜಲಾಶಯಗಳು ಭರ್ತಿ ಆಗಿವೆ’ ಎಂದರು.

‘ರಾಜ್ಯದ ಕೊಡಗು, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿವೃಷ್ಟಿ ಅನಾಹುತಗಳಾಗಿವೆ. ಅಲ್ಲೆಲ್ಲ ಸಂಪರ್ಕ ಕಡಿತಗೊಂಡ ರಸ್ತೆಗಳನ್ನು ದುರಸ್ತಿಪಡಿಸಲು ನೆರವಾಗುವಂತೆ ಹಾಗೂ ಅಗತ್ಯಬಿದ್ದರೆ ನೀರಾವರಿ ಯೋಜನೆಗಳ ಗುತ್ತಿಗೆದಾರರ ಯಂತ್ರೋಪಕರಣಗಳನ್ನು ಬಳಸಿಕೊಳ್ಳುವಂತೆ ಇಲಾಖೆಯ ಎಂಜಿನಿಯರ್‌ಗಳಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು. 

‘ನೆರೆ ಸಂತ್ರಸ್ತರಿಗೆ ನೀಡಲು ಸೆಕೆಂಡ್ಸ್ ಬಟ್ಟೆಗಳನ್ನು ಕಳುಹಿಸುವಂತೆ ನಗರದ ಗಾರ್ಮೆಂಟ್ ಕಾರ್ಖಾನೆಗಳನ್ನು ಕೋರಿದ್ದೇನೆ. ಪರಿಹಾರ ಕಾರ್ಯಕ್ಕೆ ನೆರವಾಗಲು ವಿಶೇಷ ತಂಡ ಕಳುಹಿಸುವಂತೆ ರಾಮನಗರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ’ ಎಂದರು. 


ಮಹದಾಯಿ ನದಿಯಲ್ಲಿ ನಮ್ಮ ನೀರಿನ ಹಕ್ಕು ಉಳಿಸಿಕೊಳ್ಳುತ್ತೇವೆ. ನ್ಯಾಯಮಂಡಳಿ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದು ನಿಶ್ಚಿತ. ಈ ಸಂಬಂಧ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತಿದ್ದೇವೆ.
–ಡಿ.ಕೆ.ಶಿವಕುಮಾರ್‌, ಜಲಸಂಪನ್ಮೂಲ ಸಚಿವ

ಬರಹ ಇಷ್ಟವಾಯಿತೆ?

 • 14

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !