ಮಂಗಳವಾರ, ಮಾರ್ಚ್ 31, 2020
19 °C

ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಸಂತ್ರಸ್ತ ಯುವತಿಯೊಬ್ಬರು ಹೂಡಿದ್ದ ಮೊಕದ್ದಮೆಯಲ್ಲಿ ನ್ಯಾಯಾಲಯ ನೀಡಿರುವ ನಿರ್ದೇಶನದನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಯುವತಿ 2013ರಲ್ಲಿ ಕಿರುತೆರೆಯ ಕಾರ್ಯಕ್ರಮಗಳಲ್ಲಿ ನಟಿಸುತ್ತಿದ್ದರು. ನಿರ್ಮಾಪಕನೆಂದು ಹೇಳಿಕೊಂಡು ಅವರ ಪರಿಚಯ ಮಾಡಿಕೊಂಡಿದ್ದ ಆರೋಪಿ, ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿದ್ದ. ಅದೇ ನೆಪದಲ್ಲಿ ಚೆನ್ನೈ ಹಾಗೂ ಮುಂಬೈಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅದರ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿ ಇಟ್ಟುಕೊಂಡಿದ್ದ’ 

‘ಪದೇ ಪದೇ ಯುವತಿಗೆ ಕರೆ ಮಾಡಿ ತನ್ನ ಬಳಿ ಬರುವಂತೆ ಒತ್ತಾಯಿಸುತ್ತಿದ್ದ. ಅದಕ್ಕೆ ಒಪ್ಪದಿದ್ದಾಗ ಫೋಟೊ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಹೇಳಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ’ ಎಂದು ಮೂಲಗಳು ಹೇಳಿವೆ.

‘ಆರೋಪಿ ಕೃತ್ಯವನ್ನು ಯುವತಿ ಪ್ರಶ್ನಿಸಿದ್ದಳು. ಈಗಾಗಲೇ ಮದುವೆಯಾಗಿದ್ದ ಆರೋಪಿ, ಆ ಸಂಗತಿಯನ್ನು ಮುಚ್ಚಿಟ್ಟಿದ್ದ. ಯುವತಿಯನ್ನೇ ಮದುವೆಯಾಗುವುದಾಗಿ ಹೇಳಿ ನಂಬಿಸಿದ್ದ. ಇತ್ತೀಚೆಗಷ್ಟೇ ಮದುವೆಯಾಗುವುದಿಲ್ಲವೆಂದು ಬೆದರಿಸಿದ್ದ. ನೊಂದ ಯುವತಿ ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)