ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜ.22ಕ್ಕೆ ಮತದಾರರ ಅಂತಿಮ ಪಟ್ಟಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌

Published : 30 ಡಿಸೆಂಬರ್ 2023, 16:31 IST
Last Updated : 30 ಡಿಸೆಂಬರ್ 2023, 16:31 IST
ಫಾಲೋ ಮಾಡಿ
Comments

ಬೆಂಗಳೂರು:  ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಿಸಲಾಗಿದ್ದು, ಜನವರಿ 22ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ತಿಳಿಸಿದರು.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ನಂತರ ರಾಜಕೀಯ ಪ್ರತಿನಿಧಿಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಮುಂಬರುವ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ನಮೂನೆಗಳನ್ನು ಸಲ್ಲಿಸಲು, ತಿದ್ದುಪಡಿ ಮಾಡುವ ಅವಧಿಯನ್ನು 2024ರ ಜನರಿ 12ಕ್ಕೆ ವಿಸ್ತರಿಸಲಾಗಿದೆ. ಈ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು’ ಎಂದು ಜಿಲ್ಲಾ ಚುನಾವಣಾ ಅಧಿಕಾರಿ  ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದರು.

‘ಪಾಲಿಕೆಯ ಎಲ್ಲಾ ಕಂದಾಯ ಇಲಾಖೆಯ ಕಚೇರಿಗಳಲ್ಲಿ ಬ್ಯಾನರ್‌ಗಳನ್ನು ಹಾಕಿ ನಾಗರಿಕರಲ್ಲಿ ಅರಿವು ಮೂಡಿಸಬೇಕು. ಮತದಾರರ ಪಟ್ಟಿಯಲ್ಲಿ ಸೇರುವ ಕುರಿತಂತೆ ಜಾಗೃತಿ ಮೂಡಿಸಬೇಕು’ ಎಂದರು.

ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT