ಬೆಂಗಳೂರು: ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಪಿ.ಎಂ ಸ್ವ-ನಿಧಿ ಯೋಜನೆಯಡಿ ನೀಡಲಾಗುವ ಆರ್ಥಿಕ ಬೆಂಬಲ ನೀಡುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಬ್ಯಾಂಕ್ಗಳ ಪ್ರತಿನಿಧಿಗಳಿಗೆ ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಸೂಚಿಸಿದರು.

ಬ್ಯಾಂಕ್ಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳ ಜೊತೆ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಗರ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಕಾಯ್ದೆ– 2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ, ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಗಿ) ಯೋಜನೆ–2020ರಂತೆ ಬೀದಿ ಬದಿ ವ್ಯಾಪಾರಿಗಳಿಗೆ ‘ಪಿಎಂ ಸ್ವ ನಿಧಿ’ ಯೋಜನೆ ಮುಖಾಂತರ ಬ್ಯಾಂಕುಗಳಿಂದ ಆರ್ಥಿಕ ಬೆಂಬಲ ನೀಡಲಾಗುತ್ತಿದೆ. 75 ಬ್ಯಾಂಕ್ಗಳಲ್ಲಿ ಬಾಕಿಯಿರುವ 34,651 ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು’ ಎಂದರು.

ಬೀದಿ ಬದಿ ವ್ಯಾಪಾರಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಅರ್ಹ ಬ್ಯಾಂಕ್ಗಳಿಂದ ಮೊದಲನೇ ಹಂತದಲ್ಲಿ ₹10 ಸಾವಿರ, ಎರಡನೇ ಹಂತದಲ್ಲಿ ₹20 ಸಾವಿರ, ಮೂರನೇ ಹಂತದಲ್ಲಿ ₹50 ಸಾವಿರಗಳ ಕಿರು ಸಾಲ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ವ್ಯಾಪಾರ ವಲಯಗಳ ಗುರುತು: ಪಾಲಿಕೆಯ ಎಲ್ಲ ಎಂಟು ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ವಲಯಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯೂ ನಡೆಯುತ್ತಿದ್ದು, ಈವರೆಗೆ 20,600ಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.