ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಆರ್‌ಟಿಸಿ: ಟಿಕೆಟ್‌ ರಹಿತ 3,415 ಪ್ರಯಾಣಿಕರಿಗೆ ದಂಡ

Published 28 ಮೇ 2023, 4:43 IST
Last Updated 28 ಮೇ 2023, 4:43 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ತನಿಖಾ ತಂಡಗಳು ನಿಗಮ ವ್ಯಾಪ್ತಿಯಲ್ಲಿ ಟಿಕೆಟ್‌ ರಹಿತ 3,415 ಪ್ರಯಾಣಿಕರಿಗೆ ದಂಡ ವಿಧಿಸಿದ್ದಾರೆ.

ನಿಗಮ ವ್ಯಾಪ್ತಿಯಲ್ಲಿ ಸಂಚರಿಸುವ 44,540 ಬಸ್‌ಗಳನ್ನು ತಪಾಸಣೆ ನಡೆಸಿ 3,070 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಟಿಕೆಟ್‌ ರಹಿತ ಪ್ರಯಾಣಿಕರಿಂದ ₹ 5,54,832 ದಂಡ ವಸೂಲಿ ಮಾಡಿದ್ದಾರೆ. ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ₹ 2,38,803 ಅನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT