ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ಕರ್ತವ್ಯಕ್ಕೆ ಅಡ್ಡಿ; ಶಾಸಕಿ ವಿರುದ್ಧ ಎಫ್‌ಐಆರ್

Last Updated 22 ಜನವರಿ 2021, 18:46 IST
ಅಕ್ಷರ ಗಾತ್ರ

ಬೆಂಗಳೂರು: ಕರ್ತವ್ಯನಿರತ ಗೃಹರಕ್ಷಕಿ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಜಯನಗರ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೃಷಿ ನೀತಿಗಳ ವಿರುದ್ಧ ಸ್ವಾತಂತ್ರ್ಯ ಉದ್ಯಾನ ಬಳಿ ಕಾಂಗ್ರೆಸ್ ಪಕ್ಷದಿಂದ ಇತ್ತೀಚೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದೇ ವೇಳೆ ತಮ್ಮನ್ನು ವಶಕ್ಕೆ ಪಡೆಯಲು ಬಂದಿದ್ದ ಪೊಲೀಸರ ಜೊತೆ ಶಾಸಕಿ ವಾಗ್ವಾದಕ್ಕೆ ಇಳಿದಿದ್ದರು. ಅದೇ ಸಂದರ್ಭದಲ್ಲೇ ಗೃಹ ರಕ್ಷಕಿಯೊಬ್ಬರ ಮೇಲೆ ಶಾಸಕಿ ಸೌಮ್ಯ ರೆಡ್ಡಿ ಹಲ್ಲೆ ಮಾಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಘಟನಾ ಸ್ಥಳದಲ್ಲಿದ್ದವರ ಹೇಳಿಕೆ ದಾಖಲಿಸಿಕೊಂಡು, ಪ್ರಕರಣದ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಆರೋಪಿಯು ಶಾಸಕರಾಗಿರುವುದರಿಂದ ಪ್ರಕರಣ ಸಂಬಂಧ ನಗರ ಪೊಲೀಸ್ ಕಮಿಷನರ್ ಅವರಿಗೆ ಮಾಹಿತಿ ನೀಡಲಾಗಿದೆ. ಅದರ ನಿರ್ದೇಶನ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT