ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಮದ್ಯ ಸೇವಿಸಿ ವಾಹನ ಚಾಲನೆ: 870 ಮಂದಿ ವಿರುದ್ದ ಎಫ್‌ಐಆರ್‌

ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆ
Published : 16 ಸೆಪ್ಟೆಂಬರ್ 2024, 16:26 IST
Last Updated : 16 ಸೆಪ್ಟೆಂಬರ್ 2024, 16:26 IST
ಫಾಲೋ ಮಾಡಿ
Comments

ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ನಗರ ಸಂಚಾರ ಪೊಲೀಸರು, ಒಟ್ಟು 870 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಸೆಪ್ಟೆಂಬರ್‌ 9ರಿಂದ 15ರ ವರೆಗೆ (ಏಳು ದಿನ) ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ವಿವಿಧ ಮಾದರಿಯ 57,717 ವಾಹನಗಳ ತಪಾಸಣೆ ನಡೆಸಲಾಗಿದೆ. ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ್ದ ಚಾಲಕರು, ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ದಂಡ ಸಂಗ್ರಹಿಸಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.

ಆಗಸ್ಟ್‌ 23ರಿಂದ ಸಂಚಾರ ವಿಭಾಗದ ಎಲ್ಲ ಪೊಲೀಸ್ ಠಾಣೆಗಳಲ್ಲಿ ವಾರಾಂತ್ಯದ ಗುರುವಾರದಿಂದ ಭಾನುವಾರದವರೆಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ವಾಹನ ಸವಾರರು ಹಾಗೂ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ವಿಶೇಷ ಕಾರ್ಯಾಚರಣೆ ನಡೆಸುವಂತೆ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳಿಗೆ ಸೂಚನೆ ನೀಡಲಾಗಿದ್ದು, ಅವರು ವಾರದಲ್ಲಿ ನಾಲ್ಕು ದಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಸ್ತೆ ಅಪಘಾತ ತಗ್ಗಿಸುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸಂಚಾರ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT