ಗುರುವಾರ , ಮೇ 6, 2021
25 °C

ಹುಟ್ಟುಹಬ್ಬ ಆಚರಣೆ: ನಟ ವಿಜಯ್‌ ವಿರುದ್ಧ ಎಫ್‌ಐಆರ್‌ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು:‌ ಹುಟ್ಟುಹಬ್ಬ ಆಚರಣೆಗಾಗಿ ರಸ್ತೆಯಲ್ಲೇ ಪೆಂಡಾಲ್‌ ಹಾಕಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟು ಮಾಡಿದ ಆರೋಪದಡಿ ನಟ ದುನಿಯಾ ವಿಜಯ್ (45) ವಿರುದ್ಧ ಗಿರಿನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಕಾನ್‌ಸ್ಟೆಬಲ್ ಮಧುಸೂದನ್ ಎಂಬುವರು ನೀಡಿರುವ ದೂರು ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಗಿರಿನಗರ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಕಾನ್‌ಸ್ಟೆಬಲ್ ಮಧುಸೂದನ್ ಅವರು ಇದೇ 19ರಂದು ತಡರಾತ್ರಿ ಠಾಣೆ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು. ದುನಿಯಾ ವಿಜಯ್‌ ಅವರ ಹುಟ್ಟುಹಬ್ಬವಿದ್ದಿದ್ದರಿಂದ ಬನಶಂಕರಿ 3ನೇ ಹಂತದಲ್ಲಿರುವ ಅವರ ಮನೆ ಎದುರಿನ ರಸ್ತೆಯಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿತ್ತು. ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ವಿಜಯ್‌ ಸಿದ್ಧತೆ ಮಾಡಿಕೊಂಡಿದ್ದರು.’

‘ಅಪಾಯಕಾರಿ ಆಯುಧ ತಲ್ವಾರ್‌ನಿಂದ ಸಾರ್ವಜನಿಕರ ಎದುರೇ ವಿಜಯ್ ಕೇಕ್ ಕತ್ತರಿಸಿದ್ದರು. ಅವಧಿ ಮೀರಿ ಜೋರಾದ ಶಬ್ದ ಮಾಡುವ ಧ್ವನಿವರ್ಧಕ ಬಳಕೆ ಮಾಡಿದ್ದರು. ಅದರಿಂದ ಅಕ್ಕ–ಪಕ್ಕದ ನಿವಾಸಿಗಳಿಗೆ ಹಾಗೂ ರಸ್ತೆಯಲ್ಲಿ ಹೊರಟಿದ್ದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಈವಿಷಯವನ್ನು ಕಾನ್‌ಸ್ಟೆಬಲ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು