ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚೋದನಾಕಾರಿ ಪೋಸ್ಟ್: ಬಿಜೆಪಿ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್

Published 24 ಏಪ್ರಿಲ್ 2024, 16:08 IST
Last Updated 24 ಏಪ್ರಿಲ್ 2024, 16:08 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪ್ರಚೋದನಾಕಾರಿ ಪೋಸ್ಟ್ ಪ್ರಕಟಿಸಿದ್ದ ಆರೋಪದಡಿ ಬಿಜೆಪಿಯ ‘ಎಕ್ಸ್‌’ ಖಾತೆ ನಿರ್ವಹಣೆ ಮಾಡುವವರ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಚುನಾವಣೆ ಆಯೋಗ, ‘ಬಿಜೆಪಿಯವರು ನಿರ್ವಹಣೆ ಮಾಡುವ ಎಕ್ಸ್‌ ಖಾತೆಯಲ್ಲಿ ಇತ್ತೀಚೆಗೆ ಪೋಸ್ಟ್ ಪ್ರಕಟಿಸಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವಿಚಕ್ಷಣಾ ದಳದ ಅಧಿಕಾರಿಗಳು, ವರದಿ ಸಮೇತ ಪೊಲೀಸರಿಗೆ ದೂರು ನೀಡಿದ್ದಾರೆ’ ಎಂದು ತಿಳಿಸಿದೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ‘ಚುನಾವಣೆಯ ವಿಚಕ್ಷಣಾ ತಂಡದ ಅಧಿಕಾರಿಗಳು ದೂರು ನೀಡಿದ್ದಾರೆ. ಐಪಿಸಿ 153 (ಎರಡು ಧರ್ಮಗಳ ಜನರ ನಡುವೆ ವೈಷಮ್ಯ ಸೃಷ್ಟಿಸಲು ಗಲಭೆಗೆ ಪ್ರಚೋದನೆ) ಆರೋಪದಡಿ ಬಿಜೆಪಿ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT