ಬೆಂಗಳೂರು: ವರದಕ್ಷಿಣೆ ಕಿರುಕುಳ ನೀಡಿದ್ದ ಆರೋಪದಡಿ ಆಂತರಿಕ ಭದ್ರತಾ ವಿಭಾಗದ(ಐಎಸ್ಡಿ) ಡಿವೈಎಸ್ಪಿಯೊಬ್ಬರ ವಿರುದ್ಧ ಈಶಾನ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಡಿವೈಎಸ್ಪಿ ಆರ್.ಶಂಕರಪ್ಪ ಹಾಗೂ ಮತ್ತೊಬ್ಬ ಮಹಿಳೆಯ ವಿರುದ್ಧ ದೂರು ನೀಡಲಾಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

‘ಶಂಕರಪ್ಪ ಅವರಿಗೆ ದೂರುದಾರಳ ತಂದೆ, ಮದುವೆಯ ಸಂದರ್ಭದಲ್ಲಿ ಚಿನ್ನಾಭರಣ, ಬೈಕ್ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಕೊಟ್ಟಿದ್ದರು. ಶಂಕರಪ್ಪ ಅವರು ಶಿಕ್ಷಕ ವೃತ್ತಿ ಬಿಟ್ಟು ಪೊಲೀಸ್ ಕೆಲಸಕ್ಕೆ ಸೇರಿದ್ದರು. ಪೊಲೀಸ್ ಇಲಾಖೆಗೆ ಸೇರಿದ ಮೇಲೆ ತನ್ನ ಸ್ಟೇಟಸ್ ಜಾಸ್ತಿಯಾಗಿದ್ದು, ಅದಕ್ಕೆ ತಕ್ಕಂತೆ ವರದಕ್ಷಿಣೆ ತೆಗೆದುಕೊಂಡು ಬರುವಂತೆ ಹೇಳುತ್ತಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಶೌಚಾಲಯದಲ್ಲಿ ಜಾರಿ ಬೀಳುವಂತೆ ಒದ್ದಿದ್ದಾರೆ. ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ. ಎರಡು ವರ್ಷಗಳಿಂದ ಬೇರೆ ಮಹಿಳೆಯ ಜತೆಗೆ ಸಲುಗೆಯಿಂದ ಇದ್ದಾರೆ. ಆಕೆಯ ಮಾತು ಕೇಳಿಕೊಂಡು ನಿಂದನೆ ಮಾಡುತ್ತಿದ್ದಾರೆ’ ಎಂಬ ದೂರು ಆಧರಿಸಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.