ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾದ ಆರೋಪದಡಿ ಬಂಧಿಸಲಾಗಿದ್ದ ಸಾರಿಗೆ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಬಿ.ಕೆ. ರವಿಶಂಕರ್ ವಿರುದ್ಧ ಕಾಟನ್‌ಪೇಟೆ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

‘ಆರೋಪಿ ರವಿಶಂಕರ್, ಹಲವು ವರ್ಷಗಳಿಂದ ಡ್ರಗ್ಸ್ ಜಾಲದಲ್ಲಿ ಸಕ್ರಿಯನಾಗಿದ್ದ. ಆತನ ವಿರುದ್ಧ ಬಾಣಸವಾಡಿ ಠಾಣೆಯಲ್ಲಿ 2018ರಲ್ಲೇ ಪ್ರಕರಣ ದಾಖಲಾಗಿತ್ತು. ಜಾಮೀನು ಪಡೆದುಕೊಂಡು ಹೊರಗೆ ಓಡಾಡುತ್ತಿದ್ದ. ಇದೀಗ ಮತ್ತೆ ಡ್ರಗ್ಸ್ ಜಾಲದಲ್ಲಿ ಸಿಕ್ಕಿಬಿದ್ದಿದ್ದಾನೆ’ ಎಂದು ಸಿಸಿಬಿ ಪೊಲೀಸರೊಬ್ಬರು ಹೇಳಿದರು.

‘ರವಿಶಂಕರ್ ಹಾಗೂ ಇತರರು, ಒಳಸಂಚು ನಡೆಸಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜಿಸುತ್ತಿದ್ದರು. ಅಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಆತ ನೀಡಿದ್ದ ಮಾಹಿತಿಯನ್ವಯ ನಟಿ ರಾಗಿಣಿ ಸೇರಿ 12 ಮಂದಿ ವಿರುದ್ಧ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅದರಲ್ಲಿ ರವಿಶಂಕರ್ ಹೆಸರು ಇರಲಿಲ್ಲ. ಇದೀಗ ರವಿಶಂಕರ್ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿ, ಆತನನ್ನು ಕಸ್ಟಡಿಗೆ ಪಡೆದು ತನಿಖೆ ಮುಂದುವರಿಸಲಾಗಿದೆ’ ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.