ಬೆಂಗಳೂರು: ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಗೆ ಸೇರಿದ ಜಾಗವನ್ನು ಅತಿಕ್ರಮಿಸಿಕೊಂಡ ಆರೋಪದ ಮೇರೆಗೆ ಇಬ್ಬರು ವ್ಯಕ್ತಿಗಳ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಾಗೃಹ ಇಲಾಖೆ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಖಲೀಂ ಹಾಗೂ ಕೆ.ಎಸ್.ಅನಿಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಟ್ರಾರ್ಜ್ ಪ್ರಿಸನರ್ಸ್ ಪುನರ್ವಸತಿ (ಏಡ್) ಸೊಸೈಟಿಯ ನಿವೇಶನ ಕಾರಾಗೃಹ ಇಲಾಖೆಗೆ ಸೇರಿದೆ. ಈ ನಿವೇಶನದಲ್ಲಿ ಖಲೀಂ ಎಂಬಾತ ಗುಜರಿ ವಸ್ತುಗಳನ್ನು ಸಂಗ್ರಹಿಸುವ ಗೋದಾಮು ಮಾಡಿಕೊಂಡಿದ್ದಾರೆ. ಹಲವು ಬಾರಿ ವಸ್ತುಗಳನ್ನು ತೆರವು ಮಾಡುವಂತೆ ಸೂಚಿಸಿದರೂ ತೆರವು ಮಾಡಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅದೇ ಕಟ್ಟಡದ ಒಂದನೇ ಮಹಡಿಯಲ್ಲಿರುವ ಒಂದು ಕೊಠಡಿಯನ್ನು ಅನಿಲ್ ಅತಿಕ್ರಮಿಸಿಕೊಂಡು ಕಚೇರಿ ನಡೆಸುತ್ತಿದ್ದಾರೆ. ಅದಕ್ಕೆ ಇಲಾಖೆಯ ಅನುಮತಿ ಪಡೆದಿಲ್ಲ. ಸರ್ಕಾರಿ ಸ್ವತ್ತು ಅತಿಕ್ರಮಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ನಿವೇಶನ ತೆರವುಗೊಳಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.