ಶುಕ್ರವಾರ, ಜುಲೈ 30, 2021
21 °C

ವಂಡರ್‌ಲಾ ಸಿಬ್ಬಂದಿ ವಿರುದ್ಧ ಎಫ್ಐಆರ್‌ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಗ್ರಾಹಕರ ಸುರಕ್ಷತೆ ಕುರಿತು ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಬಿಡದಿಯ ವಂಡರ್‌ಲಾ ಅಮ್ಯೂಸ್‌ಮೆಂಟ್‌ ಪಾರ್ಕಿನ ವ್ಯವಸ್ಥಾಪಕ ಹಾಗೂ ರೋಲರ್ ಕ್ರಷರ್‌ ನಿರ್ವಾಹಕರ ವಿರುದ್ಧ ಬಿಡದಿ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಇದೇ ತಿಂಗಳ 18ರಂದು ವಂಡರ್‌ಲಾದಲ್ಲಿ ರೋಲರ್‌ ಕ್ರಷರ್ ಮಗುಚಿ ಯಂತ್ರದ ಅಡಿಯಲ್ಲಿ ಕೆಲ ನಿಮಿಷ ನಾಲ್ವರು ಸಿಲುಕಿದ್ದರು. ಗಾಯಾಳುಗಳ ಪೈಕಿ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಗಾಯಾಳು ಬಾಲಾಜಿ ಎಂಬುವರು ನೀಡಿದ ದೂರು ಆಧರಿಸಿ ಪೊಲೀಸರು ದೂರು ದಾಖಲಿಸಿದ್ದರು. ವಂಡರ್‌ಲಾದಲ್ಲಿ ರೋಲರ್‌ ಮಗುಚಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು