ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‌ಐಆರ್‌

Last Updated 14 ಜುಲೈ 2021, 19:50 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ, ಕಾಂಗ್ರೆಸ್‌ನ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸೇರಿದಂತೆ 17 ಮಂದಿ ವಿರುದ್ಧ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಇಂಧನ ದರ ಹಾಗೂ ಅಗತ್ಯ ವಸ್ತುಗಳ ದರ ಏರಿಕೆ ವಿರೋಧಿಸಿ ಜುಲೈ 12ರಂದು ಯುವ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆದಿತ್ತು. ಅನುಮತಿ ಪಡೆಯದೆ, ಸೈಕಲ್ ಜಾಥಾ ನಡೆಸಿದ್ದರು. ಪ್ರತಿಭಟನೆ ವೇಳೆ ಅಂತರ ಕಾಯ್ದುಕೊಳ್ಳದೆ ಹಾಗೂ ಮಾಸ್ಕ್‌ ಧರಿಸದೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

‘ಪೊಲೀಸ್ ಸಿಬ್ಬಂದಿಯೊಬ್ಬರು ನೀಡಿರುವ ದೂರಿನ ಮೇರೆಗೆ ರಕ್ಷಾ ರಾಮಯ್ಯ ಸೇರಿದಂತೆ 17 ಜನರ ವಿರುದ್ಧ ಐಪಿಸಿ ಸೆಕ್ಷನ್ 188 ಹಾಗೂ ಎನ್‌ಡಿಎಂಎ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT