ಮಂಗಳವಾರ, ಸೆಪ್ಟೆಂಬರ್ 21, 2021
21 °C

ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ವಾರಂಟೈನ್ ನಿಯಮ ಪಾಲಿಸದ ಆರೋಪದಡಿ ಡ್ರೋನ್ ಪ್ರತಾಪ್ ವಿರುದ್ಧ ಪೊಲೀಸರು ಶನಿವಾರ ಮತ್ತೊಂದು ಎಫ್‍ಐಆರ್ ದಾಖಲಿಸಿದ್ದಾರೆ.

ರಿಚ್ಮಂಡ್ ವೃತ್ತದ ಬಳಿ ಇರುವ ತಾರಾ ಹೋಟೆಲ್‍ವೊಂದರಲ್ಲಿ ಎನ್.ಎಂ.ಪ್ರತಾಪ್‍ ಅವರನ್ನು ಜೂ.20ರಂದು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಸೋಮವಾರದ ವೇಳೆಗೆ ಕ್ವಾರೆಂಟೈನ್ ಅವಧಿ ಮುಗಿಯುತ್ತಿತ್ತು. ಅದಕ್ಕೂ ಮುನ್ನ ವಕೀಲರನ್ನು ಹೋಟೆಲ್‍ಗೆ ಕರೆಸುವ ಮೂಲಕ ಅವರು ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆ ಎಂಬುದು ಪೊಲೀಸರ ಆರೋಪ.

‘ಜು.30ರಂದು ಪ್ರತಾಪ್‌ ಸುಮಾರು 1 ಗಂಟೆಗೂ ಹೆಚ್ಚಿನ ಸಮಯ ಕೋಣೆಯಲ್ಲಿ ವಕೀಲರೊಂದಿಗೆ ಚರ್ಚೆಯಲ್ಲಿ ತೊಡಗಿ
ರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ವಾರಂಟೈನಲ್ಲಿರುವ ವ್ಯಕ್ತಿಯನ್ನು ಭೇಟಿ ಮಾಡುವುದು ಉಲ್ಲಂಘನೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ವಾರಂಟೈನ್ ನಿಯಮ ಉಲ್ಲಂಘನೆಗೆ ಜಾಮೀನು ನೀಡುವ ಷರತ್ತುಗಳನ್ನು ಕುರಿತು ಚರ್ಚಿಸಲು ವಕೀಲರನ್ನು ಕರೆಸಿಕೊಂಡಿದ್ದಾಗಿ ಪ್ರತಾಪ್ ಹೇಳಿಕೊಂಡಿದ್ದಾರೆ. ಆದರೆ, ‘ಕ್ವಾರಂಟೈನ್‍ನಲ್ಲಿರುವಾಗ ಜಾಮೀನಿನ ಪ್ರಶ್ನೆ ಎಲ್ಲಿ ಬರುತ್ತದೆ' ಎಂದು ಪೊಲೀಸರು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 51ಬಿ ಅಡಿಯಲ್ಲಿ ಐಪಿಸಿ ಸೆಕ್ಷನ್ 188, 269, 270 ಹಾಗೂ 271ರಡಿ ಪ್ರಕರಣ ದಾಖಲಿಸಲಾಗಿದೆ.

ಈ ಹಿಂದೆ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು