ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬ್ಬರದ ಸಂಗೀತ 4 ಬಾರ್‌ ವಿರುದ್ಧ ಪ್ರಕರಣ

Last Updated 18 ಜುಲೈ 2019, 19:44 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಅಬ್ಬರದ ಸಂಗೀತ ಬಳಸಿದ ಆರೋಪದಡಿ ನಾಲ್ಕು ಬಾರ್‌ ಆ್ಯಂಡ್ ರೆಸ್ಟೊರೆಂಟ್‌ಗಳ ವಿರುದ್ಧ ಬಾಣಸವಾಡಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಬಾರ್‌ಗಳಲ್ಲಿನ ಸಂಗೀತ ಪರಿಕರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.‘ಕೆಲವು ಬಾರ್ ಹಾಗೂ ರೆಸ್ಟೊರೆಂಟ್‌ಗಳಲ್ಲಿ ಅಬ್ಬರದ ಸಂಗೀತ ಕೇಳುತ್ತಿದ್ದುದರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ‘ಪಿರ್ಕಿ’, ‘ಟ್ವಿನ್ಸ್‌’, ‘ದಿ ಲೋಕಲ್’ ಹಾಗೂ ‘ಡ್ರಾಪ್ ಔಟ್’ ಹೆಸರಿನ ಬಾರ್ ಮತ್ತು ರೆಸ್ಟೊರೆಂಟ್‌ಗಳ ಮೇಲೆ ದಾಳಿ ನಡೆಸಲಾಯಿತು’ ಎಂದರು.

‘ಬಾರ್ ಮತ್ತು ರೆಸ್ಟೊರೆಂಟ್‌ನ ವ್ಯವಸ್ಥಾಪಕರು ಹಾಗೂ ಕೆಲಸಗಾರರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT