ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೆಡ್‌ಬುಷ್’ ಪ್ರಚಾರ: ಐವರ ವಿರುದ್ಧ ಎಫ್‌ಐಆರ್

Last Updated 28 ಅಕ್ಟೋಬರ್ 2022, 22:00 IST
ಅಕ್ಷರ ಗಾತ್ರ

ಬೆಂಗಳೂರು: ನಟ ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಸಿನಿಮಾ ಪ್ರಚಾರಕ್ಕೆಂದು ಅಕ್ರಮವಾಗಿ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದ್ದ ಆರೋಪದಡಿ ಐವರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕರ್ತವ್ಯದಲ್ಲಿದ್ದ ಹೆಡ್‌ ಕಾನ್‌ಸ್ಟೆಬಲ್ ಶಿವಕುಮಾರ್ ನೀಡಿರುವ ದೂರು ಆಧರಿಸಿ ಐವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ವಿಧಾನಸೌಧ ಮೆಟ್ರೊ ನಿಲ್ದಾಣದ ಮುಂಭಾಗಹಾಗೂ ದೇವರಾಜ್ ಅರಸು ರಸ್ತೆಯಲ್ಲಿ ಅಕ್ರಮವಾಗಿ ಸೇರಿದ್ದ ಆರೋಪಿಗಳು, ಹೆಡ್‌ಬುಷ್‌ ಸಿನಿಮಾಪೋಸ್ಟರ್‌ ಪ್ರದರ್ಶಿಸಿ ಜೋರಾಗಿ ಘೋಷಣೆ ಕೂಗುತ್ತಿದ್ದರು. ಸಿನಿಮಾ ಪೋಸ್ಟರ್ ಅಂಟಿಸಿದ್ದ ಬೈಕ್ ಹಾಗೂ ಕಾರುಗಳನ್ನು ರಸ್ತೆಯಲ್ಲಿ ನಿಲ್ಲಿಸಿದ್ದರು. ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದರು. ನಂತರ, ಕೆ.ಆರ್‌. ವೃತ್ತದ ರಸ್ತೆಯಲ್ಲೂ ಆರೋಪಿಗಳು ಸಂಚರಿಸಿದ್ದರು.’

‘ಕರ್ತವ್ಯದಲ್ಲಿದ್ದ ಸಿಬ್ಬಂದಿ ಆರೋಪಿಗಳ ವರ್ತನೆಯನ್ನು ಪ್ರಶ್ನಿಸಿದ್ದರು. ಅವರ ವಿರುದ್ಧವೂ ಆರೋಪಿಗಳು ಹರಿ
ಹಾಯ್ದಿದ್ದರು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT