ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಟಿ. ರವಿ ಹುಟ್ಟುಹಬ್ಬದ ಫ್ಲೆಕ್ಸ್: ಎಫ್‌ಐಆರ್ ದಾಖಲು

Last Updated 23 ಜುಲೈ 2022, 16:36 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ವಿಧಾನಸೌಧದ ಎದುರು ಫ್ಲೆಕ್ಸ್ ಅಳವಡಿಸಿದ್ದ ಇಬ್ಬರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಫ್ಲೆಕ್ಸ್ ಬಗ್ಗೆ ಗೀತಾ ಮಿಶ್ರಾ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ಜಿ. ಕಿಶನ್ ಗೌಡ್ರು ಹಾಗೂ ಎಲ್. ನರೇಂದ್ರ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಇಬ್ಬರಿಗೂ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಹೈಕೋರ್ಟ್‌ ಎದುರಿಗಿರುವ ವಿಧಾನಸೌಧ ಮುಂಭಾಗದ ರಸ್ತೆಯಲ್ಲಿ ಜುಲೈ 18ರಂದು ಫ್ಲೆಕ್ಸ್‌ ಅಳವಡಿಸಲಾಗಿತ್ತು. ಈ ಮೂಲಕ ಹೈಕೋರ್ಟ್ ಆದೇಶ ಹಾಗೂ ರಾಜ್ಯ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಆಗಿರುವುದಾಗಿ ದೂರುದಾರರು ಆರೋಪಿಸಿದ್ದಾರೆ. ಫ್ಲೆಕ್ಸ್ ಫೋಟೊ ಹಾಗೂ ವಿಡಿಯೊ ಸಹ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT