ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅವಧಿ ಮೀರಿ ಕಾರ್ಯಾಚರಣೆ: ಒನ್-8 ಪಬ್ ಮೇಲೆ ಎಫ್‌ಐಆರ್

Published 9 ಜುಲೈ 2024, 9:13 IST
Last Updated 9 ಜುಲೈ 2024, 9:13 IST
ಅಕ್ಷರ ಗಾತ್ರ

ಬೆಂಗಳೂರು: ಅವಧಿ ಮೀರಿ ತೆರೆದಿದ್ದ ನಗರದ ಕ್ವೀನ್ಸ್ ರಸ್ತೆಯಲ್ಲಿ ಇರುವ ಒನ್ -8 ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿಯ ಟಾನಿಕ್ ಬಿಲ್ಡಿಂಗ್‌ನ ಕೊನೆಯ ಮಹಡಿಯಲ್ಲಿ ಈ ಪಬ್ ಇದೆ. ಪೊಲೀಸರು ದಾಳಿ ನಡೆಸಿದ್ದ ವೇಳೆ ಅವಧಿ ಮೀರಿ ಪಬ್ ಕಾರ್ಯಾಚರಣೆ ನಡೆಸುತ್ತಿರುವುದು ಪತ್ತೆಯಾಗಿತ್ತು. ಪಬ್‌ನ ವ್ಯವಸ್ಥಾಪಕರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಈ ಪಬ್ ಭಾರತ ಕ್ರಿಕೆಟ್ ತಂಡದ ಆಟಗಾರರೊಬ್ಬರಿಗೆ ಸೇರಿದ್ದು ಎನ್ನಲಾಗಿದ್ದು ಎಫ್‌ಐಆರ್‌ನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT