ಬೆಂಗಳೂರು: ನಗರ ಸೈಬರ್ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸಿದ್ದು, ಈ ಸಂಬಂಧ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿವೃತ್ತ ನ್ಯಾಯಮೂರ್ತಿ ಜೆ.ಚೆಲಮೇಶ್ವರ್ ಅವರಿಗೆ ಕರೆ ಮಾಡಿ ಬೆದರಿಸಿರುವ ಆರೋಪಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ಮಹಾ ಪ್ರಧಾನ ಕಾರ್ಯದರ್ಶಿ ಭರತ್ ಪರಾಶರ್ ಅವರು ದೂರು ನೀಡಿದ್ದಾರೆ.

ಜ.9ರಂದು ನಿವೃತ್ತ ನ್ಯಾಯಮೂರ್ತಿ ಅವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಗಳು, ‘ತಾವು ಬೆಂಗಳೂರಿನ ಸೈಬರ್ ಕ್ರೈಂ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದರು. ನಂತರ, ಸರ್ಕಾರದ ಹೆಸರನ್ನು ನೀವು ದುರುಪಯೋಗ ಪಡಿಸಿಕೊಳ್ಳುತ್ತಿದ್ದೀರಿ ಎಂಬುದಾಗಿ ಬೆದರಿಕೆ ಹಾಕಿದ್ದರು’ ಎಂದು ಭರತ್ ಪರಾಶರ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.