ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಆಕಸ್ಮಿಕ

Published : 2 ಆಗಸ್ಟ್ 2024, 23:50 IST
Last Updated : 2 ಆಗಸ್ಟ್ 2024, 23:50 IST
ಫಾಲೋ ಮಾಡಿ
Comments

ಬೆಂಗಳೂರು: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಶುಕ್ರವಾರ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್ ಹಾಗೂ ಕೆಲವು ದಾಖಲೆಗಳು ಭಸ್ಮವಾಗಿವೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕಿಟ್‌ನಿಂದ ಈ ಘಟನೆ ನಡೆದಿದ್ದು, ಯಾರಿಗೂ ಯಾವುದೇ ತೊಂದರೆಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ವರ್ಷ ಆಗಸ್ಟ್​ 11ರಂದು ಬಿಬಿಎಂಪಿ ಮುಖ್ಯ ಕಚೇರಿಯ ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT