ಸೋಮವಾರ, ಏಪ್ರಿಲ್ 6, 2020
19 °C

ಸಚಿವ ಈಶ್ವರಪ್ಪ ನಿವಾಸದಲ್ಲಿ ಬೆಂಕಿ ಅನಾಹುತ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕುಮಾರಪಾರ್ಕ್‌ನಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರ ಸರ್ಕಾರಿ ವಸತಿ ಗೃಹದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಆಕಸ್ಮಿಕ ಸಂಭವಿಸಿ ಬಂಗಲೆಯ ವಿದ್ಯುತ್ ವೈರಿಂಗ್ ಮತ್ತು ಮರದ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.

ಭಾರಿ ಅಪಾಯದಿಂದ ಸಚಿವ ಈಶ್ವರಪ್ಪ ಹಾಗೂ ಅವರ ಪತ್ನಿ ಅಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಸಚಿವರು ಮಲಗುವ ಕೋಣೆಯ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಎಸಿ ಸ್ವಿಚ್ ಹಾಕಿದ ತಕ್ಷಣ ಶಾರ್ಟ್‌ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿತು.

ತಕ್ಷಣ ಅಳಿಯ ಸಂತೋಷ್ ಅವರಿಗೆ ಈಶ್ವರಪ್ಪ ವಿಷಯ ತಿಳಿಸಿದರು. ಸಂತೋಷ್ ಮಾಹಿತಿ ನೀಡುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.

ಕ್ಷಣದಲ್ಲಿ ಕೊಠಡಿ ಸಂಪೂರ್ಣ ಭಸ್ಮವಾಗಿದೆ. ಕೊಠಡಿಯಲ್ಲಿದ್ದ ಮಂಚ, ಹಾಸಿಗೆ, ಎಸಿ, ಬಟ್ಟೆಗಳು ಸುಟ್ಟು ಹೋಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು