ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ ಅವಘಡ: ಬಾಲಕ ಸಾವು

Published 21 ಫೆಬ್ರುವರಿ 2024, 14:09 IST
Last Updated 21 ಫೆಬ್ರುವರಿ 2024, 14:09 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು ರಸ್ತೆಯ ರಾಮಸಂದ್ರದ ಗುಜರಿ ಮಳಿಗೆಯೊಂದರಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ 15 ವರ್ಷದ ಸಾಜಿತ್‌ ಪಾಷಾ ಬುಧವಾರ ಮೃತಪಟ್ಟಿದ್ದಾನೆ.

ಶೇ 35ರಷ್ಟು ಸುಟ್ಟ ಗಾಯದಿಂದ ಬಾಲಕನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಭಾನುವಾರ ಸಂಜೆ ಸಂಭವಿಸಿದ್ದ ಅವಘಡದಲ್ಲಿ ಗುಜರಿ ಮಳಿಗೆ ಮಾಲೀಕ ಚಿಕ್ಕಬಸ್ತಿಯ ಸಲೀಂ (32), ಮೆಹಬೂಬ್ ಪಾಷಾ (32) ಸೇರಿದಂತೆ ಮೂವರು ಸಜೀವ ದಹನವಾಗಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಾಯಗೊಂಡ ಇನ್ನೂ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಒಬ್ಬರಿಗೆ ಶೇ 60ರಷ್ಟು ಸುಟ್ಟಗಾಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT