ಸೋಮವಾರ, ನವೆಂಬರ್ 18, 2019
25 °C

ಕಾಟನ್‌ಪೇಟೆಯಲ್ಲಿ ಅಗ್ನಿ ದುರಂತ: ಇಬ್ಬರ ದುರ್ಮರಣ

Published:
Updated:

ಬೆಂಗಳೂರು: ಕಾಟನ್‌ಪೇಟೆಯ ಭಕ್ಷಿ ಗಾರ್ಡನ್‌ನಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾವೇರಿ (21) ಮತ್ತು ಶ್ರೀಕಾಂತ್ (13) ಮೃತರು. ಗಂಭೀರ ಸ್ಥಿತಿಯಲ್ಲಿರುವ ಪತಿ ಮುರಳಿ ಮತ್ತು ಪತ್ನಿ ಗೀತಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದುರಂತ ಸಂಭವಿಸಿದೆ ಎನ್ನಲಾಗಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಕಾಟನ್ ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರತಿಕ್ರಿಯಿಸಿ (+)