ಬೆಂಗಳೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕುಂಬಳಗೋಡು ಕೈಗಾರಿಕಾ ಪ್ರದೇಶದಲ್ಲಿನ ಔಷಧ ತಯಾರಿಕಾ ಕಾರ್ಖಾನೆಯೊಂದು ಸೋಮವಾರ ಹೊತ್ತಿ ಉರಿದಿದೆ.

‘ಕಾರ್ಮಿಕರೆಲ್ಲಾ ಕೆಲಸ ಮುಗಿಸಿ ಮನೆಗೆ ಹೋಗಿದ್ದರು. ಮೂವರು ಮಾತ್ರ ಕಾರ್ಖಾನೆಯೊಳಗೆ ಇದ್ದರು. ಬೆಂಕಿ ಕಾಣಿಸಿಕೊಂಡ ಕೂಡಲೇ ಅವರು ಹೊರಗೆ ಓಡಿ ಬಂದಿದ್ದಾರೆ. ಹೀಗಾಗಿ ಯಾವುದೇ ಸಾವು–ನೋವು ಸಂಭವಿಸಿಲ್ಲ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿದ್ದ ಜ್ವಾಲೆ ಬಳಿಕ ಇಡೀ ಕಾರ್ಖಾನೆಗೆ ವ್ಯಾಪಿಸಿಕೊಂಡಿತ್ತು. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ರವಾನಿಸಿದ್ದಾರೆ. ಮೂರು ವಾಹನಗಳಲ್ಲಿ ಬಂದ ಸಿಬ್ಬಂದಿ ಸುಮಾರು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.