ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಸ್ಮಿಕ ಬೆಂಕಿ: ಪಿಎಸ್‌ಐ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Last Updated 9 ಮಾರ್ಚ್ 2022, 17:51 IST
ಅಕ್ಷರ ಗಾತ್ರ

ಬೆಂಗಳೂರು: ಗಾಂಧಿನಗರದಲ್ಲಿರುವ ಸುಖಸಾಗರ ಹೋಟೆಲ್‌ನ 5 ಮತ್ತು 6ನೇ ಮಹಡಿಗಳಲ್ಲಿ ಬುಧವಾರ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಪಿಎಸ್‌ಐ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದೆ.

‘ಬಂದೋಬಸ್ತ್‌ಗಾಗಿ ಸ್ವಾತಂತ್ರ್ಯ ಉದ್ಯಾನದತ್ತ ಹೊರಟಿದ್ದ ಪಿಎಸ್‌ಐ ರವಿ, ಹೋಟೆಲ್‌ನ ಮಹಡಿಯಿಂದ ದಟ್ಟ ಹೊಗೆ ಹೊರಹೊಮ್ಮುತ್ತಿದ್ದುದನ್ನು ಗಮನಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ವಿಷಯ ಮುಟ್ಟಿಸಿದ್ದಾರೆ. ಎರಡು ವಾಹನಗಳಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ಸುಮಾರು 1 ಗಂಟೆ 30 ನಿಮಿಷ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದ್ದಾರೆ.

‘ವಿಷಯ ತಿಳಿದೊಡನೆ ಅಕ್ಕಪಕ್ಕದ ಕಟ್ಟಡಗಳಲ್ಲಿದ್ದ ಜನರನ್ನು ಹೊರಗೆ ಕರೆತರಲಾಯಿತು. ಹೋಟೆಲ್‌ನಲ್ಲಿ ಸುಮಾರು 200 ಮಂದಿ ಇದ್ದರು. ಅವರನ್ನೂ ಸ್ಥಳಾಂತರಿಸಲಾಯಿತು. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.

‘ಹೋಟೆಲ್‌ನ 5 ಮತ್ತು 6ನೇ ಮಹಡಿಯಲ್ಲಿ ಹಳೆಯ ಪೀಠೋಪಕರಣಗಳನ್ನು ಇಡಲಾಗಿತ್ತು. ಘಟನೆಗೆ ನಿಖರ ಕಾರಣ ಗೊತ್ತಿಲ್ಲ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿರುವ ಶಂಕೆ ಇದೆ. ಅದು ಪೀಠೋಪಕರಣಗಳಿಗೆ ತಗುಲಿ ಎಲ್ಲವೂ ಹೊತ್ತಿ ಉರಿದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿ ಮೇಲಿಂದ ಕೆಳಗೆ ಓಡಿ ಬಂದಿದ್ದಾರೆ. ಕೊಠಡಿಗಳಲ್ಲಿ ಉಳಿದುಕೊಂಡಿದ್ದವರನ್ನು ಹೊರಗೆ ಕಳುಹಿಸಿದ್ದಾರೆ. ಹೀಗಾಗಿ ಯಾರಿಗೂ ಅಪಾಯವಾಗಿಲ್ಲ’ ಎಂದು ಉಪ್ಪಾರಪೇಟೆ ಪೊಲೀಸ್‌ ಠಾಣೆಯ ಸಿಬ್ಬಂದಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT