ಸೋಮವಾರ, ಫೆಬ್ರವರಿ 24, 2020
19 °C

ಆಸ್ಪತ್ರೆಯಲ್ಲಿ ಬೆಂಕಿ; ರೋಗಿಗಳ ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಬಳಿಯ ಸಾಗರ್ ಆಸ್ಪತ್ರೆಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

‘ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ, ಎಲ್ಲ ಮಹಡಿಯಲ್ಲಿ ಹೊಗೆ ಆವರಿಸಿಕೊಂಡಿತ್ತು’  ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹೇಳಿದರು.

‘ನಾಲ್ಕನೇ ಮಹಡಿಯಲ್ಲಿ ಹೆಚ್ಚು ಜನರು ಇರಲಿಲ್ಲ. ಉಳಿದ ಮಹಡಿಯಲ್ಲಿದ್ದ ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರು ಹೊರಗೆ ಓಡಿಬಂದರು. ಪೊಲೀಸ್ ನಿಯಂತ್ರಣ ಕೊಠಡಿಗೂ ಮಾಹಿತಿ ನೀಡಿದ್ದರು. ಕಾರ್ಯಾಚರಣೆ ನಡೆಸಿ ರೋಗಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಯಿತು. ಆಸ್ಪತ್ರೆಯ ಕೆಲ ವಸ್ತುಗಳು ಸುಟ್ಟಿವೆ. ಉಳಿದಂತೆ ಹೆಚ್ಚು ಹಾನಿ ಆಗಿಲ್ಲ’ ಎಂದರು.

‘ಆಸ್ಪತ್ರೆಯ ಯುಪಿಎಸ್‌ನಲ್ಲಿ ಶಾರ್ಟ್‌ ಸರ್ಕೀಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದೆ. ತನಿಖೆಯಿಂದಲೇ ನಿಖರ ಮಾಹಿತಿ ಲಭ್ಯವಾಗಲಿದೆ’ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು