ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ; ₹25 ಲಕ್ಷ ಹಾನಿ

Last Updated 26 ಡಿಸೆಂಬರ್ 2020, 8:25 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಶಿರ್ಕೆ ಅಪಾರ್ಟ್‌ಮೆಂಟ್‌ ಸಮುಚ್ಛಯದ ಎದುರುಗಡೆ ಇರುವ ‘ದಿ ಕಿಕ್‌ಔಟ್‌’ ಎಂಬ ರೆಸ್ಟೋರೆಂಟ್‌ನಲ್ಲಿ ಶುಕ್ರವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ₹25 ಲಕ್ಷ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಘಟನೆ ರಾತ್ರಿ ನಡೆದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರೆಸ್ಟೋರೆಂಟ್‌ನಲ್ಲಿದ್ದ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಬಂದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಸುಟ್ಟು ಕರಕಲಾಗಿರುವ ವಸ್ತುಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT